Ad Widget .

ಬಿಗ್ ಬಾಸ್ ಮನೆಯಲ್ಲಿ ಅವಘಡ| ತ್ರಿ ವಿಕ್ರಂ, ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಟಾಸ್ಕ್​ ವೇಳೆ ಅವಘಡ ಸಂಭವಿಸಿದೆ. ಈ ವೇಳೆ ತ್ರಿವಿಕ್ರಂಗೆ ಗಾಯ ಆಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಅವರು ಆಸ್ಪತ್ರೆಗೆ ಸೇರಿದ್ದಾರೆ ಎಂದು ವರದಿ ಆಗಿದೆ. ಟಾಸ್ಕ್ ವೇಳೆ ಆದ ಅವಘಡದಿಂದ ಇಡೀ ಬಿಗ್ ಬಾಸ್ ಮನೆ ಆತಂಕಕ್ಕೆ ಒಳಗಾಗಿದೆ. ತ್ರಿವಿಕ್ರಂ ಆದಷ್ಟು ಬೇಗ ಚೇತರಿಕೆ ಕಂಡು ಬರಲಿ ಎಂದು ಎಲ್ಲರೂ ಆಶಿಸುತ್ತಿದ್ದಾರೆ. ಇದೇ ವೇಳೆ ಗೋಲ್ಡ್ ಸುರೇಶ್​ಗೂ ಪೆಟ್ಟಾಗಿದೆ ಎನ್ನಲಾಗಿದೆ.

Ad Widget . Ad Widget .

ಬಿಗ್ ಬಾಸ್ ಮನೆಯಲ್ಲಿ ಸ್ವರ್ಗ ಹಾಗೂ ನರಕ ಎನ್ನುವ ಕಾನ್ಸೆಪ್ಟ್ ಮಾಡಲಾಗಿದೆ. ಸ್ವರ್ಗದಲ್ಲಿ ಇರುವವರಿಗೆ ಎಲ್ಲಾ ಸೌಕರ್ಯ ಸಿಗುತ್ತಿದೆ. ನರಕದಲ್ಲಿ ಇರುವವರಿಗೆ ಸಾಮಾನ್ಯ ಸೌಲಭ್ಯ ಮಾತ್ರ ಒದಗಿಸಲಾಗುತ್ತಿದೆ. ಎರಡೂ ಗುಂಪಿಗೆ ಒಂದು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್ ಆಡುವಾಗ ಅವಘಡ ಸಂಭವಿಸಿದೆ.

Ad Widget . Ad Widget .

ಟಾಸ್ಕ್ ಆಡುವಾಗ ಚೆಂಡು ಹಿಡಿದು ಓಡುತ್ತಿದ್ದ ತ್ರಿವಿಕ್ರಂ ಅವರು ಬಿದ್ದಿದ್ದಾರೆ. ಇದರಿಂದ ಅವರಿಗೆ ಪೆಟ್ಟಾಗಿದೆ. ಅವರನ್ನು ಕನ್ಫೆಷನ್​ ರೂಂಗೆ ಕರೆತರುವಂತೆ ಬಿಗ್ ಬಾಸ್ ಸೂಚನೆ ನೀಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ಆಗಿದೆ. ಅವರು ಚಿಕಿತ್ಸೆ ಪಡೆದು ದೊಡ್ಮನೆ ಒಳಗೆ ಬಂದಿದ್ದಾರಂತೆ. ಅದೇ ರೀತಿ ಗೋಲ್ಡ್​ ಸುರೇಶ್​ಗೂ ಪೆಟ್ಟಾಗಿದೆ ಎಂದು ಹೇಳಲಾಗುತ್ತಿದೆ.

‘ಬಿಗ್ ಬಾಸ್’ನಲ್ಲಿ ಟಾಸ್ಕ್ ಆಡುವಾಗ ಸಾಕಷ್ಟು ತೊಂದರೆಗಳು ಆಗಿದ್ದು ಇದೆ. ಕಳೆದ ಸೀಸನ್​ನಲ್ಲಿ ಪ್ರತಾಪ್ ಹಾಗೂ ಸಂಗೀತಾ ಕಣ್ಣಿಗೆ ಹಾನಿ ಆಗಿತ್ತು. ಅವರು 2-3 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದಿದ್ದರು. ಈಗ ತ್ರಿವಿಕ್ರಂ ಹಾಗೂ ಗೋಲ್ಡ್ ಸುರೇಶ್ ಅವರು ಮೊದಲನೇ ವಾರವೇ ಆಸ್ಪತ್ರೆ ಸೇರಿ ಬಂದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೊದಲ ವಾರವೇ ಕಿತ್ತಾಟ ಆರಂಭ ಆಗಿದೆ. ಸ್ಪರ್ಧಿಗಳ ಮಧ್ಯೆ ಒಂದಲ್ಲಾ ಒಂದು ವಿಚಾರಕ್ಕೆ ಗದ್ದಲ ನಡೆಯುತ್ತಿದೆ. ಟಾಸ್ಕ್ ವೇಳೆ ಅವಘಡಗಳು ನಡೆಯುತ್ತಿವೆ. ವಕೀಲ ಜಗದೀಶ್ ಅವರ ಎಲ್ಲರ ವಿರುದ್ಧವೂ ಕೂಗಾಟ ನಡೆಸುತ್ತಿದ್ದಾರೆ. ಅವರು ಬಿಗ್ ಬಾಸ್​ಗೆ ಅವಮಾನ ಮಾಡುವ ಕೆಲಸವನ್ನು ಮಾಡಿದ್ದಾರೆ.

Leave a Comment

Your email address will not be published. Required fields are marked *