ಸಮಗ್ರ ನ್ಯೂಸ್:ಹರ್ಯಾಣ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಅ.05 ರಂದು ಬೆಳಗ್ಗೆ ಆರಂಭವಾಗಿದ್ದು, ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಮತ್ತು ಕುಸ್ತಿಪಟು ವಿನೇಶ್ ಫೋಗಟ್, ಬಿಜೆಪಿಯ ದುಶ್ಯಂತ್ ಚೌಟಾಲಾ ಸೇರಿ 1031 ಮಂದಿ ಅಭ್ಯರ್ಥಿಗ ಭವಿಷ್ಯ ನಿರ್ಧಾರವಾಗಲಿದೆ.
2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ ಮತ್ತು ಜೆಜೆಪಿ 10 ಸ್ಥಾನ ಗೆದ್ದಿದ್ದವು. ಬಿಜೆಪಿಗೆ ಬಹುಮತ ಬಾರದ ಕಾರಣ ಜೆಜೆಪಿ ಬೆಂಬಲ ನೀಡಿತ್ತು. ಈ ಸಲ ಬಿಜೆಪಿ ಹಾಗೂ ಜೆಜೆಪಿ ಮೈತ್ರಿ ಮುರಿದುಕೊಂಡು ಪ್ರತ್ಯೇಕವಾಗಿ ಕಣಕ್ಕಿಳಿದಿವೆ. ಅ.08 ರಂದು ಮತ ಎಣಿಕೆ ನಡೆಯಲಿದೆ.ಇಂದು ಸಂಜೆ ಹರ್ಯಾಣ ಮತ್ತು ಜಮ್ಮು-ಕಾಶ್ಮೀರ ವಿಧಾನಸಭೆಯ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿವೆ ಎಂದು ವರದಿಗಳು ತಿಳಿಸಿವೆ.