Ad Widget .

ಮಂಗಳೂರು: ಇನ್ನೂ ಪತ್ತೆಯಾಗದ ಮಮ್ತಾಜ್ ಅಲಿ| ಫಲ್ಗುಣಿ ನದಿಯಲ್ಲಿ ತೀವ್ರ ಶೋಧ

ಸಮಗ್ರ ನ್ಯೂಸ್: ಮುಸ್ಲಿಂ ಮುಖಂಡ, ಇಲ್ಲಿನ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಬಿ.ಎಂ.ಮುಮ್ತಾಜ್ ಅಲಿ (52) ಅವರು ಭಾನುವಾರ ಮುಂಜಾನೆಯಿಂದ ನಾಪತ್ತೆಯಾಗಿದ್ದಾರೆ. ಅವರ ಬಿಎಂಡಬ್ಲ್ಯು ಕಾರು ನಗರದ ಹೊರವಲಯದ ಕೂಳೂರು ಸೇತುವೆಯಲ್ಲಿ ಪತ್ತೆಯಾಗಿದೆ. ಅವರಿಗಾಗಿ ಬೆಳಿಗ್ಗೆ 7 ಗಂಟೆಯಿಂದ ಕೂಳೂರು ಬಳಿ ಫಲ್ಗುಣಿ ನದಿಯಲ್ಲಿ ಶೋಧಕಾರ್ಯ ನಡೆದಿದ್ದು, ಇನ್ನೂ ಅವರ ಸುಳಿವು ಸಿಕ್ಕಿಲ್ಲ.

Ad Widget . Ad Widget .

ರಾಜ್ಯ ವಿಪತ್ತು ನಿರ್ವಹಣಾ ಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಕರಾವಳಿ ರಕ್ಷಣಾ ಪಡೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ತಂಡಗಳು ಆರೇಳು ದೋಣಿಗಳಲ್ಲಿ ಕೂಳೂರು ಸೇತುವೆಯ ತಳಭಾಗದಲ್ಲಿ ಫಲ್ಗುಣಿ ನದಿಯಲ್ಲಿ ಮುಮ್ತಾಜ್ ಅಲಿ ಅವರಿಗಾಗಿ ಶೋಧ ನಡೆಸುತ್ತಿವೆ. ಮಧ್ಯಾಹ್ನ 2 ಗಂಟೆವರೆಗೆ ಸತತ 7 ಗಂಟೆಗಳ ಶೋಧದ ಬಳಿಕವೂ ಅವರ ಬಗ್ಗೆ ಯಾವುದೇ ಕುರುಹು ಸಿಕ್ಕಿಲ್ಲ. ಮುಳುಗು ತಜ್ಞ ಈಶ್ವರ್‌ ಮಲ್ಪೆ ಅವರು ಸತತ ನಾಲ್ಕೈದು ಗಂಟೆ ಫಲ್ಗುಣಿ ನದಿಯಲ್ಲಿ ಹುಡುಕಿದರೂ ಮುಮ್ತಾಜ್ ಅಲಿ ಅವರ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.

Ad Widget . Ad Widget .

ಅವರ ಕಾರು ಮುಂಜಾನೆ 4.40ರ ಸುಮಾರಿಗೆ ಕೂಳೂರು ಸೇತುವೆಯತ್ತ ಸಾಗಿದ ದೃಶ್ಯಗಳು ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಮುಂಜಾನೆ 5.09ರ ಸುಮಾರಿಗೆ ಅವರ ಮಗಳು ಕೂಳೂರು ಸೇತುವೆಯಲ್ಲಿ ಅವರ ಕಾರು ಇರುವುದನ್ನು ಪತ್ತೆ ಹಚ್ಚಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮುಂಜಾನೆ 4.40 ಮತ್ತು 5.09ರ ನಡುವೆ ಅವರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆ ಇದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಬಿ.ಎಂ.ಫಾರೂಕ್‌ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಬಿ.ಎ.ಮೊಹಿಯುದ್ದೀನ್‌ ಬಾವ ಅವರು ಮುಮ್ತಾಜ್ ಅಲಿ ಅವರ ಅಣ್ಣಂದಿರು. ಮುಮ್ತಾಜ್‌ ಅಲಿ ಅವರಿಗೆ ಇಬ್ಬರು ಪುತ್ರಿಯರು, ಒಬ್ಬ ಮಗ ಹಾಗೂ ಪತ್ನಿ ಇದ್ದಾರೆ.

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಬಿ.ಎಂ.ಫಾರೂಕ್‌, ಐವನ್ ಡಿಸೋಜ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂಪಿ. ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್ವಾಲ್‌, ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್‌ ಕುಮಾರ್‌ ಭೇಟಿ ನೀಡಿದರು.

Leave a Comment

Your email address will not be published. Required fields are marked *