Ad Widget .

10ನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿಗೆ ಅವಕಾಶ

ಸಮಗ್ರ ನ್ಯೂಸ್: ರೆಗ್ಯುಲ‌ರ್ ಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಾ ವರ್ಷದಲ್ಲಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಇವುಗಳನ್ನು ಬರೆದು ಅಂತಿಮವಾಗಿ ಅನುತ್ತೀರ್ಣರಾದಲ್ಲಿ ಪುನಃ ಮುಂದಿನ ಒಂದು ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಮರು ದಾಖಲಾತಿಗೆ ಅವಕಾಶ ನೀಡಲಾಗುತ್ತದೆ.

Ad Widget . Ad Widget .

ಇತರೆ ವಿದ್ಯಾರ್ಥಿಗಳಂತೆ ಶಾಲೆಯಲ್ಲಿ ಪೂರ್ಣಾವಧಿ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮತ್ತು ಎಲ್ಲಾ ವಿಷಯದ ತರಗತಿಗೆ ಪೂರ್ಣಾವಧಿ ಹಾಜರಾಗಬೇಕು. ಈ ರೀತಿ ಪೂರ್ಣಾವಧಿ ಅಧ್ಯಯನ ಮಾಡಿ ಹಿಂದಿನ ವರ್ಷ ಅನುತ್ತೀರ್ಣರಾದ ವಿಷಯಗಳಲ್ಲಿ ಆ ವರ್ಷದ ಪರೀಕ್ಷೆ ಬರೆಯಬೇಕು. ಹಾಗೂ ಸರ್ಕಾರದಿಂದ ನೀಡುವ ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್. ಅಕ್ಷರ ದಾಸೋಹ, ಇತರೆ ಸೌಲಭ್ಯಗಳನ್ನು ನೀಡಲಾಗುವುದು.ಎಂದು ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *