ಸಮಗ್ರ ನ್ಯೂಸ್: ಶಬರಿಮಲೆ ಯಾತ್ರೆಗೈಯ್ಯುವವರು ಈ ಬಾರಿ ಆನ್‌ಲೈನ್ ಬುಕ್ಕಿಂಗ್ ಮಾಡಿಕೊಳ್ಳುವುದು ಕಡ್ಡಾಯ. ಮಂಡಲ-ಮಕರವಿಳಕ್ಕು ಯಾತ್ರೆಗೆ ಪೂರ್ವಭಾವಿಯಾಗಿ ನಡೆದ ಸಭೆಯಲ್ಲಿ ಕೇರಳ ಸರಕಾರ ಈ ಸಲ ಯಾತ್ರಾರ್ಥಿಗಳಿಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ.ಪ್ರತಿದಿನ 80,000 ಭಕ್ತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ.
ಭಕ್ತರು ಶಬರಿಮಲೆ ದೇಗುಲದ ವೆಬ್‌ಸೈಟ್‌ನಲ್ಲಿ ವರ್ಚುವಲ್ ಬುಕ್ಕಿಂಗ್ ಮಾಡಬೇಕಾಗುತ್ತದೆ.ಕಾಡಿನ ಮಾರ್ಗದಲ್ಲಿ ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ. ಈ ಸಲ ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ಸೌಲಭ್ಯ ಇರುವುದಿಲ್ಲ.ಬುಕ್ಕಿಂಗ್ ರಹಿತರಾಗಿ ಬರುವ ಭಕ್ತರನ್ನು ಪರಿಶೀಲಿಸಲು ವ್ಯವಸ್ಥೆ ಮಾಡಲಿದ್ದೇವೆ. ನಿಲಕ್ಕಲ್ ಮತ್ತು ಎರುಮೇಲಿಯಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ದೇವಸ್ವಂ ಸಚಿವ ವಿ.ಎನ್.ವಾಸವನ್ ಹೇಳಿದ್ದಾರೆ.