Ad Widget .

ಪೋಕ್ಸೋ ಪ್ರಕರಣ: ಚಿತ್ರದುರ್ಗ ಜೈಲಿನಿಂದ ಮುರುಘಾಶ್ರೀ ಬಿಡುಗಡೆ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆಗೊಳಿಸಲು ನ್ಯಾಯಾಲಯ ಆದೇಶ ಹೊರಡಿಸಿದೆ. ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ.

Ad Widget . Ad Widget .

ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಆದೇಶಿಸಿತ್ತು. ಇದೀಗ, ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ. ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ಕೈ ಸೇರಿದ ಬಳಿಕ ಬಿಡುಗಡೆಯಾಗಲಿದ್ದಾರೆ. ಬಿಡುಗಡೆ ಬಳಿಕ ಶ್ರೀಗಳು ದಾವಣಗೆರೆಯ ಶಿವಯೋಗಿ ಮಂದಿರಕ್ಕೆ ತೆರಳಲಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *