ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಕವಿತಾ ಗೌಡ ಹಾಗೂ ಚಂದನ್ ಕುಮಾರ್ ದಂಪತಿಗೆ ಗಂಡು ಮಗುವಿನ ಜನನವಾಗಿತ್ತು. ಮಗುವಿನ ಮುಖವನ್ನು ರಿವೀಲ್ ಮಾಡಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಈ ಕೋರಿಕೆಯನ್ನು ಅವರು ಈಡೇರಿಸಿದ್ದಾರೆ. ಸ್ವತಃ ಕವಿತಾ ಗೌಡ ಅವರೇ ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಹೆಚ್ಚು ಲೈಕ್ಸ್ ಸಿಕ್ಕಿದೆ.

ಲಕ್ಷ್ಮೀ ಬಾರಮ್ಮ’ದಲ್ಲಿ ಒಟ್ಟಾಗಿ ತೆರೆ ಹಂಚಿಕೊಂಡಿದ್ದ ಚಂದನ್ ಕವಿತಾ. ಆ ಬಳಿಕ ಇಬ್ಬರ ಮಧ್ಯೆ ಪ್ರೀತಿ ಮೂಡಿತು. ನಂತರ ಮದುವೆ ಆಗುವ ನಿರ್ಧಾರ ತೆಗೆದುಕೊಂಡರು.