Ad Widget .

ನವರಾತ್ರಿ ವೇಳೆಯೇ ಅರಮನೆಗೆ ಹೊಸ ಅತಿಥಿ.. ಯದುವೀರ್-ತ್ರಿಷಿಕಾ ದಂಪತಿಗೆ 2ನೇ ಮಗು ಜನನ

ಸಮಗ್ರ ನ್ಯೂಸ್: ಮೈಸೂರು ಅರಮನೆಯಲ್ಲಿ ದಸರಾ ಸಂಭ್ರಮ ಮನೆ ಮಾಡಿದೆ, ಇತ್ತ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಪತ್ನಿ ತ್ರಿಷಿಕಾ ದಂಪತಿಗೆ ಎರಡನೇ ಗಂಡು ಮಗು ಜನಿಸಿದೆ.

Ad Widget . Ad Widget .

ಇದೀಗ ನವರಾತ್ರಿ ಸಂಭ್ರಮದಲ್ಲಿ ರಾಜರ ಕುಟುಂಬದಲ್ಲಿ ಸಂತಸ ಮತ್ತಷ್ಟು ಹೆಚ್ಚಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ದೇವಿ ಅವರು 2ನೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ, ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಇದರಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗೆ, ಮೈಸೂರು ಅರಮನೆಗೂ ಮೈಸೂರಿನ ಜನತೆಗೂ ದಸರಾ ಹಬ್ಬದ ಸಂಭ್ರಮ ಇದರಿಂದ ದುಪ್ಪಟ್ಟಾಗಿದೆ.

Ad Widget . Ad Widget .

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ವಿವಾಹ ರಾಜಸ್ಥಾನದ ದುಂಗರ್‌ಪುರ್ ಯುವರಾಣಿ ತ್ರಿಷಿಕಾ ಅವರೊಂದಿಗೆ 2016 ಜೂನ್ 27ರಂದು ನಡೆದಿತ್ತು.

Leave a Comment

Your email address will not be published. Required fields are marked *