Ad Widget .

ಟಾಟಾ ಗ್ರೂಪ್ ನ ಅಧ್ಯಕ್ಷರಾಗಿ ನೋಯಲ್ ಟಾಟಾ ನೇಮಕ

ಸಮಗ್ರ ನ್ಯೂಸ್: ಟಾಟಾ ಗ್ರೂಪ್ ಗೆ ಹೊಸ ವಾರಸುದಾರರ ಆಯ್ಕೆಯಾಗಿದೆ. ಟಾಟಾ ಟ್ರಸ್ಟ್ ಗಳ ಮುಖ್ಯಸ್ಥರಾಗಿ ನೋಯಲ್ ಟಾಟಾ ಅವರನ್ನು ನೇಮಕ ಮಾಡಲಾಗಿದೆ. ಇಂದು(ಅ.12) ಶುಕ್ರವಾರ ಟಾಟಾ ಟ್ರಸ್ಟ್ ಗಳ ಮಂಡಳಿ ಸಭೆ ನಡೆದಿದ್ದು, ಅದರಲ್ಲಿ ಒಮ್ಮತದಿಂದ ನೋಯಲ್ ಅವರ ಪರವಾಗಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.

Ad Widget . Ad Widget .

ಟಾಟಾ ಗ್ರೂಪ್ ನ ಮಾಲೀಕ ಸಂಸ್ಥೆಯಾದ ಟಾಟಾ ಸನ್ಸ್ ನಲ್ಲಿ ಟಾಟಾ ಟ್ರಸ್ಟ್ ಗಳು ಬಹುಪಾಲು ಷೇರುದಾರಿಕೆ ಹೊಂದಿವೆ. ಈ ಮೂಲಕ ಟಾಟಾ ಗ್ರೂಪ್ ನ ಒಡೆತನ ನೋಯಲ್ ಟಾಟಾಗೆ ಸಿಗಲಿದೆ.

Ad Widget . Ad Widget .

67 ವರ್ಷದ ನೋಯಲ್ ಟಾಟಾ ಅವರು ರತನ್ ಟಾಟಾ ತಂದೆಯ ಎರಡನೇ ಪತ್ನಿಯ ಮಗ. ಟಾಟಾ ಕುಟುಂಬಕ್ಕೆ ಸೇರಿದ ಸರ್ ದೊರಾಬ್ ಜಿ ಟಾಟಾ ಟ್ರಸ್ಟ್ ಮತ್ತು ಸರ್ ರತನ್ ಟಾಟಾ ಟ್ರಸ್ಟ್ ಮಂಡಳಿಗಳ ಟ್ರಸ್ಟೀಗಳಲ್ಲಿ ಒಬ್ಬರಾಗಿರುವ ನೋಯಲ್ ಟಾಟಾ ಅವರು ಮುಂದಿನ ವಾರಸುದಾರ ಎಂಬುದು ಬಹುತೇಕ ನಿಶ್ಚಿತವಾಗಿತ್ತು.

87 ವರ್ಷದ ರತನ್ ಟಾಟಾ ಮೊನ್ನೆ ಬುಧವಾರ ಸಂಜೆ ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ರತನ್ ಅವರ ತಂದೆ ನವಲ್ ಟಾಟಾ ಅವರಿಗೆ ಎರಡು ವಿವಾಹವಾಗಿತ್ತು. ಮೊದಲ ಪತ್ನಿಗೆ ವಿಚ್ಛೇದನ ನೀಡಿ ಎರಡನೇ ಮದುವೆಯಾಗಿದ್ದರು. ರತನ್ ಮತ್ತು ಜಿಮ್ಮಿ ಟಾಟಾ ಅವರು ಮೊದಲ ಪತ್ನಿಯ ಮಕ್ಕಳಾಗಿದ್ದಾರೆ. ನೋಯಲ್ ಟಾಟಾ ಅವರು ಎರಡನೇ ಪತ್ನಿಯ ಮಗ. ನೋಯಲ್ ಅವರಿಗೆ ಒಂದು ಗಂಡು ಮಗು ಸೇರಿ ಮೂವರು ಮಕ್ಕಳಿದ್ದಾರೆ.

Leave a Comment

Your email address will not be published. Required fields are marked *