ಉಡುಪಿ: 9 ಮಂದಿ‌ ಬಾಂಗ್ಲಾ ಪ್ರಜೆಗಳು ಅರೆಸ್ಟ್

ಸಮಗ್ರ ನ್ಯೂಸ್: ವಿಜಯದಶಮಿ ಹಬ್ಬದ ದಿವನೇ ಉಡುಪಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉಡುಪಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 9 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ.

Ad Widget ... ..

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಡುಪಿ ಪೊಲೀಸರು ಮಲ್ಪೆ ಬಳಿ 9 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಿದ್ದಾರೆ. ನಕಲಿ ಆಧಾರ್ ಕಾರ್ಡ್, ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Ad Widget

ಬಂಧಿತರನ್ನು ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಎಂದು ಗುರುತಿಸಲಾಗಿದ್ದು, ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಿಸಿಕೊಂಡು ಬಂದು ಇಲ್ಲಿ ನೆಲೆಸಿದ್ದರು. ಸದ್ಯ ವಿಚಾರಣೆ ನಡೆಸಲಾಗುತ್ತಿದೆ.

Leave a Comment

Your email address will not be published. Required fields are marked *