Ad Widget .

ಇಂದು ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ| ಮೈಸೂರಿನಲ್ಲಿ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ

ಸಮಗ್ರ ನ್ಯೂಸ್: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಸಂಭ್ರಮ ಕಳೆಗಟ್ಟಿದೆ. ನವರಾತ್ರಿ ಆಚರಣೆಯ ಅಂತಿಮಘಟ್ಟವಾದ ವಿಜಯದಶಮಿಯ ಇಂದು(ಸೆ.13) ವಿಶ್ವವಿಖ್ಯಾತ ಜಂಬೂ ಸವಾರಿ ನಡೆಯಲಿದೆ.

Ad Widget . Ad Widget .

ಜಂಬೂ ಸವಾರಿಯಲ್ಲಿ ಇದೇ ಮೊದಲ ಬಾರಿಗೆ 51 ಸ್ತಬ್ಧಚಿತ್ರಗಳು ಭಾಗವಹಿಸುತ್ತಿವೆ. ಯಾವುದೂ ಪುನರಾವರ್ತನೆಯಾಗಿಲ್ಲ. ಪ್ರತಿಯೊಂದೂ ಆಕರ್ಷಕವಾಗಿವೆ. ಈ ಬಾರಿ ಮೊದಲ ಬಾರಿಗೆ ಭಾರತೀಯ ರೈಲ್ವೆ, ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾಲಯದ ಸಾಧನೆಗಳ ಜೊತೆಗೆ ಸ್ವಾತಂತ್ರ್ಯಪೂರ್ವ-ನಂತರದಲ್ಲಿ ಸಾಧಿಸಿರುವ ಪ್ರಗತಿಯ ಕುರಿತ ಸ್ತಬ್ಧಚಿತ್ರಗಳು ಗಮನ ಸೆಳೆಯಲಿವೆ.

Ad Widget . Ad Widget .

ಮೈಸೂರು ರೇಷ್ಮೆ ಸೀರೆಗಳನ್ನು ಉತ್ಪಾದನೆ ಮಾಡುವಂತಹ ಕರ್ನಾಟಕ ರೇಷ್ಮೆ ಉದ್ಯಮ ನಿಗಮದಿಂದ ಹೊರತರುತ್ತಿರುವ ಅಪ್ಪಟ ಜರಿ ಸೀರೆಗಳ ನೋಟ ಸೆರೆದಿಡುವಂತಹ ಸ್ತಬ್ಧಚಿತ್ರ, ಮೈಸೂರು ಸ್ಯಾಂಡಲ್ ಸೋಪ್, ಗಂಧದಕಡ್ಡಿ, ಕಲಾಕೃತಿಗಳನ್ನು ಬಿಂಬಿಸುವಂತಹ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಸ್ತಬ್ಧಚಿತ್ರ ಪ್ರದರ್ಶನವಾಗಲಿದೆ.

ಅ.3ರಿಂದ ಅ. 11ರವರೆಗೆ ಮೈಸೂರು ದಸರಾ ಸಂಭ್ರಮ ಕಣ್ತುಂಬಿಕೊಳ್ಳಲು ನಾಲ್ಕು ಲಕ್ಷ ಜನರು ಭೇಟಿ ನೀಡಿರುವುದು ದಾಖಲಾಗಿದೆ. ವಿಜಯದಶಮಿಯಂದು ನಡೆಯುವ ಚಿನ್ನದ ಅಂಬಾರಿಯ ಜಂಬೂ ಸವಾರಿ ವೀಕ್ಷಣೆಗೆ 2 ಲಕ್ಷ ಸೇರುವ ನಿರೀಕ್ಷೆಯಿದೆ ಎನ್ನಲಾಗಿದೆ.

ಮೈಸೂರಿನ ವಸತಿಗೃಹಗಳು, ಹೋಟೆಲ್‌ಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿವೆ. ಜೊತೆಗೆ ಮೈಸೂರು ಆಸುಪಾಸಿನ ಪ್ರವಾಸಿ ತಾಣಗಳಲ್ಲೂ ಜನಜಂಗುಳಿ ಕಂಡುಬರುತ್ತಿದೆ. ಪ್ರವಾಸಿಗರಿಂದಾಗಿ ನವರಾತ್ರಿ ಅವಧಿಯಲ್ಲಿ ಮೈಸೂರಿನ ಹೋಟೆಲ್, ಸಾರಿಗೆ, ವಸತಿಗೃಹಗಳು ಒಟ್ಟು 200 ಕೋಟಿ ಆದಾಯ ಗಳಿಸಿವೆ ಎಂದು ಅಂದಾಜಿಸಲಾಗಿದೆ.

ಶನಿವಾರ ಮಧ್ಯಾಹ್ನ 1.41ರಿಂದ 2.10ರವರೆಗೆ ಅರಮನೆಯ ಬಲರಾಮ ದ್ವಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಂದಿಧ್ವಜಕ್ಕೆ ಪೂಜೆ ನೆರವೇರಿಸಿ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಸಂಜೆ 4 ರಿಂದ 4.30ರವರೆಗೆ ಅಂಬಾವಿಲಾಸ ಅರಮನೆ ಆವರಣದಲ್ಲಿ 780 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಗೊಂಡ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ನಡೆಸಲಿದ್ದಾರೆ.

ಒಟ್ಟು 5 ಕಿ.ಮೀವರೆಗೆ ಸಾಗುವ ಮೆರವಣಿಗೆಯು ಬನ್ನಿಮಂಟಪ ತಲುಪಲಿದೆ. ಸಂಜೆ 7ಕ್ಕೆ ಪಂಜಿನ ಕವಾಯತು ನಡೆಯಲಿದ್ದು, ರಾಜ್ಯಪಾಲ ಥಾವರಚಂದ್ ಗೆಹಲೋಟ್ ಅವರು ಗೌರವ ವಂದನೆ ಸ್ವೀಕರಿಸುವರು. ಇದೇ ವೇಳೆ ಡ್ರೋನ್ ಶೋ ಕೂಡ ಇರಲಿದೆ.

Leave a Comment

Your email address will not be published. Required fields are marked *