Ad Widget .

ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ| ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಳ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಒಳನಾಡಿನಲ್ಲಿ ನಿನ್ನೆಯಿಂದ ಜಿಟಿಜಿಟಿ ಮಳೆ ಆರಂಭವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ.

Ad Widget . Ad Widget .

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವೆಡೆ ಜಿಟಿಜಿಟಿ ಮಳೆಯಾಗುತ್ತಿದೆ. ನಿನ್ನೆಯಿಂದ ಆರಂಭವಾಗಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಬಿಟ್ಟು ಬಿಡದೆ ಬೀಳುತ್ತಿರುವ ತುಂತುರು ಮಳೆಯಿಂದಾಗಿ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವವರಿಗೆ ತೊಂದರೆಯಾಗಿದೆ.

Ad Widget . Ad Widget .

ನಾಳೆಯಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದರು. ಬಂಗಾಳದ ಉಪಸಾಗರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ಪಾಂಡಿಚೇರಿ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದ ಕರಾವಳಿ ಹಾಗೂದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಲವಾದ ಮೇಲ್ಮೈ ಗಾಳಿ ಕೆಲವೆಡೆ ಬೀಸಲಿದ್ದು, ಗುಡುಗು ಮಿಂಚಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಇನ್ನು ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಆಗಾಗ್ಗೆ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Comment

Your email address will not be published. Required fields are marked *