ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗೆ ಚುನಾವಣೆ ಘೋಷಣೆ| ನ.13 ಮತ್ತು 20ರಂದು ಮತದಾನ; ನ.23ರಂದು ಫಲಿತಾಂಶ

ಸಮಗ್ರ ನ್ಯೂಸ್: ಭಾರತೀಯ ಚುನಾವಣಾ ಆಯೋಗವು (ಇಸಿಐ) ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ಒಂದೇ ಹಂತದಲ್ಲಿ ನ.20 ರಂದು ಮತದಾನ ನಡೆಯಲಿದೆ.

Ad Widget ... ..

ಜಾರ್ಖಂಡ್ ನಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಮೊದಲನೆ ಹಂತ ನ.13 ರಂದು ಮತ್ತು ಎರಡನೇ ಹಂತವು ನ.20 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ನ.23 ರಂದು ಮತಎಣಿಕೆ ನಡೆಯಲಿದೆ.

Ad Widget

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.

Leave a Comment

Your email address will not be published. Required fields are marked *