ಇಲ್ಲಿದೆ ಸಂಪೂರ್ಣ ಮಾಹಿತಿ
ಸಮಗ್ರ ನ್ಯೂಸ್:ಕೆಮ್ಮು, ಅಸ್ತಮಾ, ತಲೆನೋವು (Headache), ಮೂಗು ಸೋರುವಿಕೆ, ಸಂಧಿವಾತದ ಕೀಲು ನೋವು, ಅನೋರೆಕ್ಸಿಯಾ ಇತ್ಯಾದಿಗಳ ಚಿಕಿತ್ಸೆಯಲ್ಲಿ ವೀಳ್ಯದೆಲೆಯನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಇದು ನೋವು, ಉರಿಯೂತ ಮತ್ತು ಊತವನ್ನು ನಿವಾರಿಸುತ್ತದೆ. ವೀಳ್ಯದ ಎಲೆಗಳು ವಿಟಮಿನ್ (Vitamin) ಸಿ, ಥಯಾಮಿನ್, ನಿಯಾಸಿನ್, ರೈಬೋಫ್ಲಾವಿನ್ ಮತ್ತು ಕ್ಯಾರೋಟಿನ್‌ನಂತಹ ವಿಟಮಿನ್‌ಗಳಿಂದ ತುಂಬಿವೆ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ.
ವೀಳ್ಯದೆಲೆಯನ್ನು ಜಗಿಯುವುದರಿಂದ ಜೀರ್ಣಕ್ರಿಯೆ (Digestion)ಯು ಸರಾಗವಾಗಿ ಆಗುತ್ತದೆ ಎನ್ನುವುದು ನಂಬಿಕೆ.ವೀಳ್ಯದೆಲೆ ಅಥವಾ ಪಾನ್ ಹೆಚ್ಚಿನ ನೀರಿನ ಅಂಶ ಮತ್ತು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದು ಕಡಿಮೆ ಪ್ರಮಾಣದ ಕೊಬ್ಬು ಮತ್ತು ಮಧ್ಯಮ ಪ್ರಮಾಣದ ಪ್ರೋಟೀನ್ ಅನ್ನು ಸಹ ಹೊಂದಿದೆ.
ಇದು ಅಯೋಡಿನ್, ಪೊಟ್ಯಾಶಿಯಮ್, ವಿಟಮಿನ್ ಎ, ವಿಟಮಿನ್ ಬಿ 1, ವಿಟಮಿನ್ ಬಿ 2 ಮತ್ತು ನಿಕೋಟಿನಿಕ್ ಆಮ್ಲದಂತಹ ಪೋಷಕಾಂಶಗಳಿಂದ ಕೂಡಿದೆ. ಮತ್ತು ಈ ಎಲೆಗಳು ವಿಟಮಿನ್ ಸಿ, ಥಯಾಮಿನ್, ನಿಯಾಸಿನ್, ರೈಬೋಫ್ಲಾವಿನ್ ಮತ್ತು ಕ್ಯಾರೋಟಿನ್‌ನಂತಹ ವಿಟಮಿನ್‌ಗಳಿಂದ ತುಂಬಿವೆ ಮತ್ತು ಕ್ಯಾಲ್ಸಿಯಂನ ಉತ್ತಮ ಮೂಲವಾಗಿದೆ.