Ad Widget .

ಭಾಗಮಂಡಲ: ನಾಳೆ(ಅ.17) ಮುಂಜಾನೆ ಕಾವೇರಿ ಪವಿತ್ರ ತೀರ್ಥೋದ್ಭವ

ಸಮಗ್ರ ನ್ಯೂಸ್: ಕಾವೇರಿಯ ಉಗಮಸ್ಥಾನ ತಲಕಾವೇರಿ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ. 17ರ ಬೆಳಗ್ಗೆ 7.40ಕ್ಕೆ ತುಲಾ ಸಂಕ್ರಮಣ ಮುಹೂರ್ತದಲ್ಲಿ ಪವಿತ್ರ ತೀರ್ಥೋದ್ಭವ ಜರಗಲಿದೆ.

Ad Widget . Ad Widget .

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌.
ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕರಾದ ಎ.ಎಸ್‌. ಪೊನ್ನಣ್ಣ, ಡಾ| ಮಂಥರ್‌ ಗೌಡ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

Ad Widget . Ad Widget .

ಪೊಲೀಸ್‌ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಭಾಗಮಂಡಲದಿಂದ ತಲಕಾವೇರಿಗೆ ಹಾಗೂ ತಲಕಾವೇರಿಯಿಂದ-ಭಾಗಮಂಡಲಕ್ಕೆ 15 ಬಸ್‌ಗಳು ಓಡಾಡಲಿವೆ.

ತಲಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಅ. 16 ಮತ್ತು 17ರಂದು ತಲಕಾವೇರಿ, ಭಾಗಮಂಡಲ ಮತ್ತು ಚೇರಂಬಾಣೆ ಗ್ರಾಮದ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ರೀತಿಯ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್‌ ರಾಜಾ ಅವರು ಆದೇಶಿಸಿದ್ದಾರೆ.

Leave a Comment

Your email address will not be published. Required fields are marked *