ವಯನಾಡ್‌ ಉಪಚುನಾವಣೆ/ ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ

ಸಮಗ್ರ ನ್ಯೂಸ್‌: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ ಎಂದು ಎಐಸಿಸಿ ಅಧಿಕೃತವಾಗಿ ತಿಳಿಸಿದೆ. ಕೇಂದ್ರ ಚುನಾವಣಾ ಆಯೋಗ ಮಂಗಳವಾರ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಿದ ಬೆನ್ನಲ್ಲಿಯೇ ಎಐಸಿಸಿ ತನ್ನ ಸ್ಪರ್ಧಿಯನ್ನು ಅಂತಿಮ ಮಾಡಿದೆ.

. Ad Widget . Ad Widget

ಈಗಾಗಲೇ ಈ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸುವುದು ಖಚಿತವೂ ಆಗಿತ್ತು. ಚುನಾವಣೆ ಘೋಷಣೆಯಾದ ಬಳಿಕ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಲು ಕಾಂಗ್ರೆಸ್‌ ನಿರ್ಧರಿಸಿತ್ತು. ಕಳೆದ ಲೋಕಸಭಾ ಚುನಾವಣೆಯ ವೇಳೆ ವಯನಾಡ್ ಹಾಗೂ ಉತ್ತರ ಪ್ರದೇಶದ ರಾಯ್‌ ಬರೇಲಿ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದರು. ಎರಡೂ ಕ್ಷೇತ್ರದಲ್ಲಿ ಗೆದ್ದಿದ್ ರಾಹುಲ್ ಗಾಂಧಿ, ತಮ್ಮ ಕುಟುಂಬದ ಪ್ರತಿಷ್ಠೆಯ ಕ್ಷೇತ್ರವಾಗಿದ್ದ ರಾಯ್‌ ಬರೇಲಿಯನ್ನು ಉಳಿಸಿಕೊಳ್ಳಲು ತೀರ್ಮಾನ ಮಾಡಿದ್ದರು.ಈಗ ಅಣ್ಣನ ಜಾಗಕ್ಕೆ ತಂಗಿ ಸ್ಪರ್ಧೆ ಮಾಡಲಿದ್ದಾರೆ. ಇದು ಪ್ರಿಯಾಂಕಾ ಗಾಂಧಿ ಅವರ ಮೊದಲ ಚುನಾವಣೆ ಎನಿಸಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *