ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿಯ ಬರ್ಬರ ಹತ್ಯೆ ನಡೆದು ನಾಲ್ಕು ತಿಂಗಳು ಕಳೆದಿದೆ. ಈ ಕೊಲೆ ಮಾಡಿದವರು ನಟ ದರ್ಶನ್ ಹಾಗೂ ಗ್ಯಾಂಗ್ ಎನ್ನುವ ಆರೋಪದಿಂದ ಪ್ರಕರಣ ಕೋರ್ಟ್ ಅಂಗಳದಲ್ಲಿ ಇದೆ. ಇನ್ನೂ ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾ ಐದು ತಿಂಗಳ ಗರ್ಭಿಣಿಯಾಗಿದ್ದರು. ಇದೀಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ.

Ad Widget ... ..

ಪವಿತ್ರಾಗೆ ರೇಣುಕಾ ಸ್ವಾಮಿ ಅಶ್ಲೀಲ ಮೆಸೇಜ್ ಮಾಡಿದ್ದರಿಂದ ದರ್ಶನ್ ಕೋಪಗೊಂಡು ರೇಣುಕಾ ಸ್ವಾಮಿಯನ್ನು ಪತ್ತೆ ಹಚ್ಚಿಸಿ ಬೆಂಗಳೂರಿಗೆ ಕರೆತರುವ ಕೆಲಸ ದರ್ಶನ್ ಗ್ಯಾಂಗ್ ನಿಂದ ನಡೆದಿತ್ತು. ಇನ್ನೂ ಬೆಂಗಳೂರಿನ ಪಟ್ಟಣಗೆರೆಯ ಶೆಡ್ನಲ್ಲಿ ರೇಣುಕಾಸ್ವಾಮಿ ಕೊಲೆ ನಡೆಯಿತು. ರೇಣುಕಾ ಸ್ವಾಮಿ ಕೊಲೆಯ ಬಳಿಕ ಇಡೀ ಕುಟುಂಬ ಕಣ್ಣೀರಲ್ಲೇ ಕೈ ತೊಳೆಯುತ್ತಾ ಬಂದಿದೆ. ‘ಮಗ ಕೈ ಮುಗಿದು ಕೇಳಿಕೊಂಡಾಗ ಅವರು ಬಿಟ್ಟುಬಿಡಬೇಕಿತ್ತು’ ಎಂದು ತಂದೆ-ತಾಯಿ ಕಣ್ಣೀರು ಹಾಕಿದ್ದರು. ಅಲ್ಲದೆ, ದರ್ಶನ್ಗೆ ಒಳ್ಳೆಯದಾಗಲ್ಲ ಎಂದು ಶಾಪ ಕೂಡ ಹಾಕಿದ್ದರು.

Ad Widget

ಇದೀಗ ನೊಂದ ಕುಟುಂಬಕ್ಕೆ ಖುಷಿ ಸಿಕ್ಕಿದ್ದು ರೇಣುಕಾಸ್ವಾಮಿ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ. ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾಗೆ ಹೆರಿಗೆ ಆಗಿದೆ.

Leave a Comment

Your email address will not be published. Required fields are marked *