Ad Widget .

ಬಿಗ್ ಬಾಸ್ ನಿಲ್ಲಿಸಿ ಎಂದು ಕೋರ್ಟ್ ಮೆಟ್ಟಿಲೇರಿದ ವೀಕ್ಷಕ… ತುರ್ತು ನೋಟಿಸ್ ನೀಡಿದ ನ್ಯಾಯಾಲಯ

ಸಮಗ್ರ ನ್ಯೂಸ್: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ದೊಡ್ಡ ರಿಯಾಲಿಟಿ ಶೋ ಗಳಲ್ಲಿ ಒಂದಾದ ಬಿಗ್ ಬಾಸ್ 11 ನೇ ಸೀಸನ್ ಗೆ ಒಂದಲ್ಲ ಒಂದು ರೀತಿಯಲ್ಲಿ ಸಂಕಷ್ಟ ಎದುರಾಗುತ್ತಲೇ ಇದೆ. ಬಿಗ್ ಬಾಸ್ 11 ನೇ ಸೀಸನ್ ಪ್ರಾರಂಭವಾಗಿ ಇಂದಿಗೆ 19 ದಿನ ಕಳೆದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಇನ್ನೂ ಇದೇ ಶೋನಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚೆತ್ತುಕೊಂಡು ನರಕ-ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಿಕೊಡಲಾಗಿದೆ. ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

Ad Widget . Ad Widget .

ಹೌದು ಬಿಗ್ ಬಾಸ್ 11 ನೇ ಸೀಸನ್ ಪ್ರಸಾರವನ್ನು ಖಾಯಂ ಆಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಮಾನ್ಯ ಪ್ರಧಾನ ವ್ಯವಹಾರ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2 ರೆಡ್ ವಿತ್ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದು ನ್ಯಾಯಾಧೀಶರಾದ ಚಾಂದಿನಿ ಜಿ.ಯು ರವರು ವಕೀಲ ಕೆ.ಎಲ್ ಭೋಜರಾಜ್ ರವರ ಅರ್ಜಿ ಕೈಗೆತ್ತಿಕೊಂಡಿದ್ದು ಸಿವಿಲ್ ಕಾರ್ಯವಿಧಾನದ ಕೋಡ್ ಕಾಯಿದೆ U/sec.26,order7,rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ. ಒಟ್ಟಾರೆಯಾಗಿ ಕಿಚ್ಚ ಸುದೀಪ್ ನಡೆಸುತ್ತಿರುವ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಅಡೆತಡೆ ಉಂಟಾಗುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *