Ad Widget .

ಚಳಿಗಾಲದ ಅಧಿವೇಶನ: ಉತ್ತರ ಕರ್ನಾಟಕಕ್ಕೆ ಈ ಬಾರಿ ಹೆಚ್ಚಿನ ಒತ್ತು: ಸ್ಪೀಕರ್

ಸಮಗ್ರ ನ್ಯೂಸ್: ಈ ವರ್ಷವೂ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲಿದ್ದು ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿವೇಶನದ ದಿನಾಂಕವನ್ನು ನಿಗದಿ ಮಾಡುತ್ತೇವೆ ಎಂದು ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯ ಸಂದರ್ಭದಲ್ಲಿ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

Ad Widget . Ad Widget .

ಈ ವರ್ಷ ಇನ್ನಷ್ಟು ಚೆನ್ನಾಗಿ ಅಧಿವೇಶನ ಮಾಡಲು ಸಿದ್ಧತೆ ನಡೆದಿದೆ. ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹೆಚ್ಚಿನ ಒತ್ತು ನೀಡುತ್ತೇವೆ ಎಂದು ತಿಳಿಸಿದ್ದಾರೆ. ಜನಪ್ರತಿನಿಧಿಗಳು ವಿಧಾನಸೌಧ ಮಾತ್ರ ಅಲ್ಲ ಸುವರ್ಣ ವಿಧಾನಸೌಧಕ್ಕೆ ಎಲ್ಲರೂ ಬರಬೇಕು. ಸುಲಭದಲ್ಲಿ ಪಾಸ್ ಸಿಗುವ ವ್ಯವಸ್ಥೆ ಮಾಡುತ್ತೇವೆ. ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನೂ ಕರೆದುಕೊಂಡು ಬರುವ ವ್ಯವಸ್ಥೆ ಕೂಡ ಇದೆ ಎಂದು ಹೇಳಿದ್ದಾರೆ.

Ad Widget . Ad Widget .

ಇನ್ನೂ ಸುವರ್ಣ ಸೌಧದಲ್ಲಿ ಗಾಂಧಿ ಪ್ರತಿಮೆ ಈ ವರ್ಷ ಸ್ಥಾಪನೆ ಆಗಲಿದೆ. ಜೊತೆಗೆ ಸತ್ಯಮೇವ ಜಯತೆ ಧ್ಯೇಯವಾಕ್ಯ ಬರೆಸುವಂತೆ ಕಾನೂನು ಅನುಸಾರು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ

Leave a Comment

Your email address will not be published. Required fields are marked *