Ad Widget .

ನಟ ಸುದೀಪ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ನಿಧನ ಹೊಂದಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Ad Widget . Ad Widget .

ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ. ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

Ad Widget . Ad Widget .

ಜಯನಗರದ ಅಪೋಲೊ ಆಸ್ಪತ್ರೆಗೆ ಸುದೀಪ್ ಅವರ ತಾಯಿಯನ್ನು ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 07:04 ಕ್ಕೆ ಸುದೀಪ್​ರ ತಾಯಿ ನಿಧನ ರಾಗಿದ್ದಾರೆ. ತಾಯಿಯ ಅನಾರೋಗ್ಯದ ಕಾರಣಕ್ಕೆ ನಿನ್ನೆ ಬಿಗ್​ಬಾಸ್ ಶೂಟಿಂಗ್ ಅನ್ನು ಬೇಗನೆ ಮುಗಿಸಿ ಹೋಗಿದ್ದಾರೆ ಸುದೀಪ್. ನಿನ್ನೆಯ ವಾರದ ಪಂಚಾಯಿತಿ, ಸಾಮಾನ್ಯಕ್ಕಿಂತಲೂ ಕಡಿಮೆ ಅವಧಿಗೆ ಪ್ರಸಾರವಾಗಿತ್ತು.

Leave a Comment

Your email address will not be published. Required fields are marked *