Ad Widget .

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ| ಅ.22ರವರೆಗೆ ಭಾರೀ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯ ಚಂಡಮಾರುತದ ಪ್ರಭಾವ ಕಡಿಮೆಯಾಗಿದ್ದರೂ, ಅರಬ್ಬೀ ಸುಮುದ್ರದಲ್ಲಿನ ಚಂಡಮಾರುತ ಚುರುಕು ಪಡೆದಿದೆ. ಇದರಿಂದ ಕರಾವಳಿ ಮತ್ತು ಒಳನಾಡಿನಲ್ಲಿ ವಾಯುಭಾರ ಕುಸಿತ ಮುಂದುವರೆದಿದೆ. ಅ.21 ರಿಂದ 22 ರವರೆಗೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗು ಚಿತ್ರದುರ್ಗ ತುಮಕೂರು ಜಿಲ್ಲೆಗಳಿಗೆ ಅ.20 ರಿಂದ 22 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಇನ್ನು ಅ.20 ರಂದು ಒಂದೇ ದಿನ ದಕ್ಷಿಣ ಕನ್ನಡ, ಚಿಕ್ಕಾಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

Ad Widget . Ad Widget . Ad Widget .

ತುಮಕೂರು, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಯಚೂರು, ಬಾಗಲಕೋಟೆ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗು ಕರಾವಳಿ, ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Leave a Comment

Your email address will not be published. Required fields are marked *