Ad Widget .

ಕಳಚಿದ ಯಕ್ಷಲೋಕದ ಹಿರಿಯ ಕೊಂಡಿ| ತೆಂಕುತಿಟ್ಟಿನ ಪ್ರಸಿದ್ಧ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಸಮಗ್ರ ನ್ಯೂಸ್: ತೆಂಕುತಿಟ್ಟಿನ ಯಕ್ಷಗಾನದ ಹಾಸ್ಯರಾಜ ಎಂದೇ ಪ್ರಖ್ಯಾತಿ ಪಡೆದ ಶುದ್ಧ ಹಾಸ್ಯ ನೀಡುವ ಮೂಲಕ ಪ್ರೇಕ್ಷಕರ ಮನರಂಜಿಸುತ್ತಿದ್ದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ಅ.21ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ.

Ad Widget . Ad Widget .

ಬೆಂಗಳೂರಿನಲ್ಲಿ ಯಕ್ಷಗಾನ ಕಾರ್ಯಕ್ರಮವೊಂದಕ್ಕೆ ಭಾಗವಹಿಸಲು ಆಗಮಿಸಿದ್ದ ಅವರು ಇಂದು ಮುಂಜಾನೆ ನಾಲ್ಕು ಗಂಟೆಗೆ ಬೆಂಗಳೂರಿನಲ್ಲಿ ಹೃದಯಘಾತವಾಗಿದೆ.

Ad Widget . Ad Widget .

ಹಿರಿಯ ಕಲಾವಿದ ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಅ. 21ರಿಂದ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳಿದ್ದರು. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಫಲವಾಗದೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.

ಬಂಟ್ವಾಳದಲ್ಲಿ 1957, ಅಕ್ಟೋಬರ್ 12ರಂದು ಬಂಟ್ವಾಳ ಗಣಪತಿ ಆಚಾರ್ಯ, ಭವಾನಿ ಅಮ್ಮ ಅವರ ಪುತ್ರರಾಗಿ ಜನಿಸಿದ ಜಯರಾಮ ಆಚಾರ್ಯರು, ಬಂಟ್ವಾಳ ಸರಕಾರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಬೋರ್ಡ್ ಶಾಲೆ)ಯಲ್ಲಿ ವಿದ್ಯಾಭ್ಯಾಸ ನಡೆಸಿದ್ದಾರೆ. ತಂದೆಯವರ ಪ್ರೇರಣೆಯಿಂದ ಅಮ್ಹಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿ ವೇಷವನ್ನೂ ಮಾಡಿದ್ದರು.

ಜಯರಾಮ ಆಚಾರ್ಯರ ತಂದೆ ಬಂಟ್ವಾಳ ಗಣಪತಿ ಆಚಾರ್ಯ ಕೂಡ ಕಲಾವಿದರಾಗಿದ್ದು, ವಿವಿಧ ಮೇಳಗಳಲ್ಲಿ ಹಾಸ್ಯ ಕಲಾವಿದರಾಗಿಯೂ ಸೇವೆ ಸಲ್ಲಿಸಿದ್ದರು. ತಾಳಮದ್ದಳೆಗಳನ್ನು ನೋಡುತ್ತಾ ಬೆಳೆದಿದ್ದ ಜಯರಾಮ ಆಚಾರ್ಯರು ತಂದೆಯವರ ಜತೆ ಯಕ್ಷಗಾನ ಪ್ರದರ್ಶನಗಳಿಗೆ ಹೋಗಿ‌ ಆಸಕ್ತಿ ಬೆಳೆಸಿಕೊಂಡಿದ್ದರು. ನಾಟ್ಯಾಭ್ಯಾಸ ಮಾಡುವ ಮೊದಲೇ ಒಂದಷ್ಟು ಮೇಳಗಳಲ್ಲಿ ಸೇವೆ ಸಲ್ಲಿಸಿರುವುದು ಅವರ ಹೆಗ್ಗಳಿಕೆಯಾಗಿದೆ.

Leave a Comment

Your email address will not be published. Required fields are marked *