BREAKING: DCM ಡಿ.ಕೆ.ಶಿಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್

ಸಮಗ್ರ ನ್ಯೂಸ್: ಡಿಸಿಎಂ ಡಿಕೆ ಶಿವಕುಮಾ‌ರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ‘ಗೆ ರಿಟ್ ಅರ್ಜಿ ಸಲ್ಲಿಸಿದ್ದರು.ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ದೆಹಲಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಡಿಕೆಶಿಗೆ ಸೇರಿದ ಆಸ್ತಿಗಳಲ್ಲಿ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು.

ನಂತರ ಜಾರಿ ನಿರ್ದೇಶನಾಲಯ ಡಿಕಿಶಿ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಡಿಕೆಶಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವು ಹಿಂಪಡೆದಿತ್ತು.

Leave a Comment

Your email address will not be published. Required fields are marked *