Ad Widget .

ಯೋಗಿ ವಿರುದ್ಧ ಪುತ್ರಿ ನಿಶಾ ಸಮರ: ಎಲ್ಲವನ್ನೂ ಬಯಲು ಮಾಡುವೆ ಎಂದ ಸೈನಿಕನ ಮಗಳು!

ಸಮಗ್ರ ನ್ಯೂಸ್ : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಮಾಜಿ ಸಚಿವ ಸಿ.ಪಿ.ಯೋಗೇಶ್ವ‌ರ್ ವಿರುದ್ಧ ಅವರ ಪುತ್ರಿ ನಿಶಾ ಯೋಗೇಶ್ವ‌ರ್ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲವನ್ನೂ ಬೆಳಕಿಗೆ ತರುತ್ತೇನೆ ಎಂದು ಗುಡುಗಿದ್ದಾರೆ.

Ad Widget . Ad Widget .

ನಾನು ರಾಜಕೀಯಕ್ಕೆ ಬರದಂತೆ ತಡೆದರು,ಸಮಾಜ ಸೇವೆಗೆ ಇಳಿಯದಂತೆ ತಡೆದರು,ವಿದ್ಯಾಭ್ಯಾಸ ಮಾಡದಂತೆ ತಡೆದರು,ಯಾವ ಕ್ಷೇತ್ರದಲ್ಲೂ ಮುಂದೆ ಬರಲು ಬಿಡುತ್ತಿಲ್ಲ ಕೊನೆಗೆ ಜೀವನದಲ್ಲಿ ನೆಮ್ಮದಿಯಾಗಿರುವುದಕ್ಕೂ ಬಿಡುತ್ತಿಲ್ಲ. ನನ್ನ ಜೀವನದ ಸತ್ಯವನ್ನು ಹೊರತರುತ್ತೇನೆ ಎಂದು ಹೇಳಿದ್ದಾರೆ.

Ad Widget . Ad Widget .

ನನ್ನಿಂದ ಏನು ಸಮಸ್ಯೆ ಏಕೆ ದ್ವೇಷ ತಿಳಿಯುತ್ತಿಲ್ಲ. ಸತ್ಯ ಬೇರೆಯೇ ಇದೆ. ಆ ಸತ್ಯವನ್ನು ಬೇಗ ಹೊರಗಡೆ ತರುತ್ತೇನೆ ಎಂದರು.ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ಯೋಗೇಶ್ವ‌ರ್ ಹಾಗೂ ಪುತ್ರಿ ನಿಶಾ ಮಧ್ಯೆ ಕಳೆದ 4-5 ತಿಂಗಳಿಂದ ವೈಮನಸ್ಸು ಮೂಡಿದೆ ಎನ್ನಲಾಗಿದೆ.

Leave a Comment

Your email address will not be published. Required fields are marked *