Ad Widget .

ಕಲುಷಿತ ನೀರು ಸೇವಿಸಿ ಇಬ್ಬರು ಸಾವು, 15 ಜನ ಅಸ್ವಸ್ಥ

ಸಮಗ್ರ ನ್ಯೂಸ್:ಕಲುಷಿತ ನೀರು ಸೇವಿಸಿ ಇಬ್ಬರು ಸಾವನಪ್ಪಿದ್ದು, 15 ಜನ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ. ತುಂಬಿಗೇರಿಯಲ್ಲಿ ನಡೆದಿದೆ.

Ad Widget . Ad Widget .

ಗ್ರಾಮದ ಸುರೇಶ ಭೋವಿ (32),ಮಹಾಂತೇಶ ಭೋವಿ (35) ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.ಇದೆ ವೇಳೆ 15 ಜನರು ಕಲುಷಿತ ನೀರು ಸೇವಿಸಿ ವಾಂತಿ ಭೇತಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Ad Widget . Ad Widget .

ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ನೀರಿನ ಪೈಪ್ ಒಡೆದು ಅದಕ್ಕೆ ಚರಂಡಿ ನೀರು ಸೇರಿ ಕಲುಷಿತಗೊಂಡಿದೆ.ಆದರೆ ಗ್ರಾಮಸ್ಥರು ಕಲುಷಿತ ನೀರು ಸೇವನೆಯೆ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಗ್ರಾಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *