ಸಮಗ್ರ ನ್ಯೂಸ್: ಹಾಸನಾಂಬ ದೇಗುಲದ ಬಾಗಿಲನ್ನು ಬಾಗಿಲು ಮದ್ಯಾಹ್ನ 12 ಗಂಟೆಗೆ ಗುರುವಾರರಂದು ತೆರೆಯಲಾಗುತ್ತಿದ್ದು, ನವೆಂಬರ್ 3ರವರೆಗು ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು ಬರುವ ನಿರೀಕ್ಷೆಯಲ್ಲಿ ಜಿಲ್ಲಾಡಳಿತ ಇದ್ದು ಇದಕ್ಕಾಗಿ ಭರ್ಜರಿ ತಯಾರಿ ನಡೆಸಿದೆ. ದೇಗುಲವನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು ದೇಗುಲದ ಆವರಣದಲ್ಲಿ ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್, ಸಾಂಪ್ರದಾಯಿಕ ಮಾದರಿಯ ಮಾಡೆಲ್‌ಗಳು, ಮಳೆ, ಬಿಸಿಲಿನಿಂದ ರಕ್ಷಣೆಗಾಗಿ ಸ್ಮನ್ ಟೆಂಟ್ ಮತ್ತು ದೊನ್ನೆ ಪ್ರಸಾದ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ.
ಹಾಸನಾಂಬೆ ಉತ್ಸವದಲ್ಲಿ ಈ ವರ್ಷ ದಸರಾ ಮಾದರಿಯ ದೀಪಾಲಂಕಾರ, ಇದೇ ಮೊದಲಬಾರಿಗೆ ಫಲಪುಷ್ಪ ಪ್ರದರ್ಶನ, ಹಾಟ್ ಏರ್ ಬಲೂನ್, ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಲೈಟಿಂಗ್ ವೀಕ್ಷಣೆಗೆ ಡಬಲ್ ಡೆಕ್ಕರ್ ಬಸ್ ಇರಲಿದೆ. ಕಳೆದ ವರ್ಷ ಆದ ಕೆಲ ಲೋಪಗಳನ್ನು ಸರಿಪಡಿಸಿಕೊಂಡು, ಈ ವರ್ಷ ಅದ್ಧೂರಿ ಹಬ್ಬ ಆಚರಣೆಗೆ ತಯಾರಿ ಮಾಡಿಕೊಂಡಿದ್ದೇವೆ. ಹಾಸನಾಂಬ ಆ್ಯಪ್, ದರ್ಶನಕ್ಕೆ ಆನ್ನೈನ್ ಬುಕ್ಕಿಂಗ್ ವ್ಯವಸ್ಥೆ ಸೇರಿ ಸಕಲ ತಯಾರಿ ಮಾಡಿಕೊಳ್ಳಲಾಗಿದೆ. ಒಟ್ಟಿನಲ್ಲಿ ನಾಡಿನ ಮೂಲೆ ಮೂಲೆಯಿಂದ ಬರುವ ಭಕ್ತರಿಗಾಗಿ ಸಕಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.