Ad Widget .

ಬೇಲೆಕೇರಿ‌ ಬಂದರು ಅದಿರು ನಾಪತ್ತೆ ಪ್ರಕರಣ ಅಪರಾದ ಸಾಬೀತು ಹಿನ್ನಲೆ| ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅರೆಸ್ಟ್

ಸಮಗ್ರ ನ್ಯೂಸ್: 2010ರ ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣ ಸಂಬಂಧದ ತೀರ್ಪನ್ನು ಕೋರ್ಟ್ ಪ್ರಕಟಿಸಿದೆ. ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರು ಅಪರಾಧಿ ಎಂಬುದಾಗಿ ತನ್ನ ತೀರ್ಪಿನಲ್ಲಿ ಕೋರ್ಟ್ ಪ್ರಕಟಿಸಿದೆ. ಆದರೇ ಶಿಕ್ಷೆಯ ಪ್ರಮಾಣವನ್ನು ನಾಳೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಹಿನ್ನಲೆಯಲ್ಲಿ ಸಿಬಿಐ ಅಧಿಕಾರಿಗಳು ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಈ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ- ಪ್ರತಿವಾದವನ್ನು ಆಲಿಸಿತ್ತು. ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತೀರ್ಪು ಪ್ರಕಟಿಸಿದ್ದು, ಬೇಲೆಕೇರಿಯಲ್ಲಿ ಸೀಜ್ ಆಗಿದ್ದಂತ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಸಂಬಂಧ ಒಟ್ಟು 6 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಾದ ಪ್ರತಿವಾದವನ್ನು ಆಲಿಸಿ, ಕಾಂಗ್ರೆಸ್ ಶಾಸಕ ಸತೀಶ್ ಸೈಲ್, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಅವರನ್ನು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಈ ಹಿನ್ನಲೆಯಲ್ಲಿ ಆರೋಪಿಗಳನ್ನು ಸಿಬಿಐ ಬಂಧಿಸಿ, ಪರಪ್ಪನ ಅಗ್ರಹಾರ ಜೈಲು ಸೇರಿಸಿದೆ.

Ad Widget . Ad Widget . Ad Widget .

ಅಂದಹಾಗೇ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆ ಸಿಬಿಐ ನಿಂದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ ಪ್ರಕರಣ ವಿಚಾರಣೆ ನಡೆಸಿದಂತ ನ್ಯಾಯಾಲಯವು ಇಂದು ಶಾಸಕ ಸತೀಶ್ ಸೈಲ್ ಸೇರಿ ಎಲ್ಲಾ ಆರೋಪಿಗಳು ದೋಷಿ ಎಂಬುದಾಗಿ ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣವನ್ನು ಅ.25ರಂದು ಪ್ರಕಟಿಸಲಿದೆ.

Leave a Comment

Your email address will not be published. Required fields are marked *