ಸಮಗ್ರ ನ್ಯೂಸ್: ಡಾನಾ ಚಂಡಮಾರುತ ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ ಒಡಿಶಾದ್ಯಂತ ಜನಜೀವನ ಅಸ್ತವ್ಯಸ್ಥಗೊಂಂಡಿದೆ. ಪ್ರಚಂಡ ಮಳೆ ಹಾಗೂ ಭಾರೀ ಬಿರುಗಾಳಿಯಿಂದಾಗಿ ರಾಜ್ಯಾದ್ಯಂತ ಆತಂಕದ ಪರಿಸ್ಥಿತಿ ಎದುರಾಗಿದೆ.
ಡಾನಾ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲೂ ಸಹ ಬೀರಲಿದ್ದು, ಇನ್ನೂ ಎರಡು ದಿನ ರಾಜ್ಯಾದ್ಯಂತ ಮಳೆಯಾಗುವ ಸಂಭವವಿದೆ.
100-110 ಮೈಲಿ ವೇಗದಲ್ಲಿ ಚಂಡ ಮಾರುತ ಬಂದು ಅಪ್ಪಳಿಸುತ್ತಿದ್ದು, ಏಕಾಏಕಿ ಮಳೆ ಅಬ್ಬರ ಹೆಚ್ಚಾಗಿದೆ. ಭದ್ರಕ್, ಕೇಂದ್ರಪರ, ಬಲಸೋರ್ ಹಾಗೂ ಜಗತ್ ಸಿಂಗ್ ಪುರ ಜಿಲ್ಲೆಯಲ್ಲಿ ಇದುವರೆಗೂ 6 ಲಕ್ಷ ಮಂದಿಯನ್ನು ಸ್ಥಳಾಂತರಗೊಳಿಸಲಾಗಿದೆ.
ಉತ್ತರ ಹಾಗೂ ನೈರುತ್ಯ ಭಾಗದಿಂದ ಒಡಿಶಾದೆಡೆಗೆ ಸಾಗಿ ಬರುತ್ತಿರುವ ಭಾರೀ ಚಂಡಮಾರುತವು ಧಮರಾದಿಂದ 15 ಕಿಮೀ ಹಾಗೂ ಭೈತರಣಿಕಾದಿಂದ ಮೂವತ್ತು ಕಿಮೀ ವರೆಗೂ ಪರಿಣಾಮ ಬೀರಲದೆ. ಕ್ರಮೇಣ ಚಂಡಮಾರುತದ ಅಬ್ಬರ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಎಕ್ಸ್ ಖಾತೆಯಲ್ಲಿ ಹೇಳಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಹಲವೆಡೆ ಜಿನುಗು ಮಳೆ ಆರಂಭವಾಗಿದೆ. ಇನ್ನೂ ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಹೆಚ್ಚಿದೆ ಎಂದು ಎಚ್ಚರಿಕೆ ಸಂದೇಶವನ್ನು ಹವಾಮಾನ ಇಲಾಖೆ ರವಾನಿಸಿದೆ. ಅಲ್ಲದೆ, ಇನ್ನುಳಿದ ಹಲವು ಜಿಲ್ಲೆಗಳಲ್ಲೂ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ವ್ಯಾಪಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಾನ ಚಂಡಮಾರುತದ ಪರಿಣಾಮ ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ, ಬಿಹಾರ, ಛತ್ತೀಸ್ ಗಢ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಅಕ್ಟೋಬರ್ 24-25 ರಂದು ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕರಾವಳಿಗೆ ದಾನಾ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಕಟ್ಟೆಚ್ಚರ ವಹಿಸಿದೆ ಮತ್ತು ಯಾವುದೇ ಪರಿಸ್ಥಿತಿಯನ್ನು ಎದುರಿಸಲು ತನ್ನ ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳನ್ನು ನಿಯೋಜಿಸಿದೆ ಎಂದು ನಿಮ್ಮ ಮಾಹಿತಿಗಾಗಿ ನಾವು ನಿಮಗೆ ತಿಳಿಸುತ್ತೇವೆ. ಸಮುದ್ರದಲ್ಲಿ ತುರ್ತು ಪರಿಸ್ಥಿತಿಯಲ್ಲಿ ವಿಮಾನಗಳನ್ನು ನಿಯೋಜಿಸಲಾಗಿದೆ. ಈ ಸಂಬಂಧ ರಕ್ಷಣಾ ಸಚಿವಾಲಯ ಹೇಳಿಕೆ ನೀಡಿದೆ. ಕೋಸ್ಟ್ ಗಾರ್ಡ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಚಂಡಮಾರುತದ ಪ್ರಭಾವದಿಂದ ಉಂಟಾಗುವ ಯಾವುದೇ ತುರ್ತು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧತೆಯನ್ನು ಖಚಿತಪಡಿಸಿಕೊಳ್ಳಲು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅದು ಹೇಳಿದೆ.