Ad Widget .

ಸುರತ್ಕಲ್: ಮುಸ್ಲಿಂ ಯುವಕನಿಂದ ಆಘಾತಕಾರಿ ಸಂದೇಶ| ಆತ ಕತ್ತರಿಸುವ ಬದಲು ಸಾವು ಮೇಲೆಂದು ಆತ್ಮಹತ್ಯೆಗೆ ಯತ್ನಿಸಿದ ಯುವತಿ| ಪೊಲೀಸ್ ಇಲಾಖೆ ವಿರುದ್ಧ ಶಾಸಕ ಭರತ್ ಶೆಟ್ಟಿ ಆಕ್ರೋಶ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಗೆ ಅಶ್ಲೀಲ ಮೆಸೇಜ್ ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ್ದ ಇಡ್ಯಾ ನಿವಾಸಿ ಶಾರಿಕ್‌ ನೂರ್ಜಹಾನ್‌ ಎಂಬವರವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಪೊಲೀಸ್ ವೈಫಲ್ಯದ ವಿರುದ್ಧ ಶಾಸಕ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Ad Widget . Ad Widget .

ಈ ಕುರಿತಂತೆ ಠಾಣೆಯಲ್ಲಿ ಯುವತಿಯ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭ ನಿರ್ಲಕ್ಷ್ಯವಾಗಿ ವರ್ತಿಸಿರುವ ಠಾಣಾ ಪೊಲೀಸರ ಕ್ರಮ ಖಂಡನೀಯ. ಯುವತಿ ಇದೀಗ ಜೀವನ್ಮರಣದ ಸ್ಥಿತಿಯಲ್ಲಿದ್ದು, ಇದರ ಜವಾಬ್ದಾರಿಯನ್ನು ಪೊಲೀಸರೇ ಹೊರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

Ad Widget . Ad Widget .

ಹಿಂದೂ ಕಾರ್ಯಕರ್ತರು ಸಹನೆ ಕಳೆದುಕೊಳ್ಳುವ ಮುನ್ನ ಜಿಲ್ಲಾಡಳಿತ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Comment

Your email address will not be published. Required fields are marked *