ಸಮಗ್ರ ನ್ಯೂಸ್: ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ಕುರಿತು ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕರ್ನಾಟಕ ಹೈಕೋರ್ಟ್ ಇಂದು ವಜಾ ಮಾಡಿದೆ.
ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಎಂಬುವವರು ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ. ಅಂಜಾರಿಯಾ ಮತ್ತು ನ್ಯಾ.ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ಪಿಐಎಲ್ ವಜಾಗೊಳಿಸಿ ಆದೇಶಿಸಿದೆ.
ಮಾ.8ರಂದು (2018) ಸಿಎಂ ಸಿದ್ದರಾಮಯ್ಯ ಅವರು ಹಳದಿ, ಬಿಳಿ ಮತ್ತು ಕೆಂಪು ವರ್ಣಗಳ ನಡುವೆ ಗಂಡಭೇರುಂಡ ಚಿಹ್ನೆ ಹೊಂದಿರುವ ಧ್ವಜವನ್ನು ಸಾರ್ವಜನಿಕವಾಗಿ ಅನಾವರಣಗೊಳಿಸಿದ್ದರು. ಈ ಧ್ವಜಕ್ಕಾಗಿ ಕೇಂದ್ರ ಸರ್ಕಾರದಿಂದ ಮಾನ್ಯತೆಗೆ ಕೋರಲಾಗಿತ್ತು.