Ad Widget .

ಮಂಗಳೂರು: 24 ತುಂಡು ಮಾಡುತ್ತೇನೆ ಎಂದು ಮೆಸೇಜ್ ಹಾಕಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ನನ್ನ ಜೊತೆ ಸಹಕರಿಸು ಇಲ್ಲದಿದ್ದರೆ 24 ಪೀಸ್ ಗಳನ್ನಾಗಿ ಮಾಡುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ ಯುವಕನನ್ನು ಅರೆಸ್ಟ್ ಮಾಡಿರುವ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಶಾರೀಕ್ ಬಂಧಿತ ಆರೋಪಿ.

Ad Widget . Ad Widget .

ಆರೋಪಿ ಇಡ್ಯಾ ಪರಿಸರದ ಯುವತಿಯೊಬ್ಬಳ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಆಕೆಯ ಅಣ್ಣನಿಗೆ ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಬೆದರಿಕೆ ಸಂದೇಶ ಕಳುಹಿಸಿದ್ದ. ಈ ಹಿನ್ನಲೆ ಯುವತಿ ಸುರತ್ಕಲ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಳು. ಅದರಂತೆ ತನಿಖೆ ನಡೆಸಿದ ಪೊಲೀಸರು ಶಾರಿಕ್ ನನ್ನು ಬಂಧಿಸಿದ್ದಾರೆ.

Ad Widget . Ad Widget .

ದಿನಾಂಕ 24-10-2024 ರಂದು, ಯುವತಿಗೆ ಮತ್ತೊಂದು ಬೆದರಿಕೆ ಸಂದೇಶ ಬಂದಿದ್ದು, ಇದರಿಂದಾಗಿ ಆಕೆ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಅಲ್ಲದೇ, ಶಾರೀಕ್ ಮತ್ತು ಅವರ ತಾಯಿ ನೂರ್ ಜಹಾನ್ ರವರ ಕಿರುಕುಳದಿಂದ ಆತ್ಮಹತ್ಯೆಗೆ ತೀರ್ಮಾನಿಸಿರುವುದಾಗಿ ಪತ್ರ ಬರೆದು, 25-10-2024ರ ಮುಂಜಾನೆ ಆತ್ಮಹತ್ಯೆಗೆ ಯತ್ನಿಸಿದ್ದಳು. ಅವರನ್ನು ತಕ್ಷಣವೇ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.

ಈ ಘಟನೆಯ ನಂತರ, ಯುವತಿ ನೀಡಿದ ಪ್ರಕಾರ, ಶಾರೀಕ್ ಅವರ ನಿರಂತರ ಕಿರುಕುಳದಿಂದ ತಾನು ಭೀತಿಯಾಗಿದ್ದೇನೆ ಎಂದು ತಿಳಿಸಿದ್ದಾಳೆ. ಇದರ ಆಧಾರದಲ್ಲಿ, ಸುರತ್ಕಲ್ ಪೊಲೀಸ್ ಪೊಲೀಸರು ಶಾರೀಕನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *