ಸಮಗ್ರ ನ್ಯೂಸ್: ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ರಾಜ್ಯದ ಖಾಸಗಿ ಶಾಲೆಗಳಲ್ಲಿ ಕರಾಳ ದಿನ ಆಚರಿಸಲು ಕರ್ನಾಟಕ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಣಯ ಕೈಗೊಂಡಿದೆ.
ಸಂಘಟನೆಯ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾತನಾಡಿ, ಕನ್ನಡ ಮಾಧ್ಯಮ ಖಾಸಗಿ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಿರ್ಧಾರಿಸಿದೆ.
ನವೆಂಬರ್ 1ರ ರಾಜ್ಯೋತ್ಸವದಂದು ಶಿಕ್ಷಕರು, ಆಡಳಿತ ಮಂಡಳಿ ಸದಸ್ಯರು ಕಪ್ಪುಪಟ್ಟಿ ಧರಿಸಿ ಕರಾಳ ದಿನ ಆಚರಿಸಲಿದ್ದಾರೆ. ಶಾಲೆಗಳಿಗೆ ಮಾನ್ಯತೆ ನವೀಕರಣ, ಆರ್‌ಟಿಇಗೆ ಚಾಲನೆ, ಆರ್‌ಟಿಇ ಶುಲ್ಕ ಮರುಪಾವತಿ, ಗ್ರಾಚ್ಯುಟಿ ಪಾವತಿ ಸೇರಿದಂತೆ ಇನ್ನಿತರ ಸಮಸ್ಯೆಗಳಿಗೆ ನ್ಯಾಯ ಪಡೆಯಲು ಕೋರ್ಟ್ ಮೊರೆ ಹೋಗಲು ನಿರ್ಣಯ ಕೈಗೊಳ್ಳಲಾಗಿದೆ.