ನಿಧಿ ಆಸೆಗಾಗಿ ಹೆತ್ತ ಮಗುವನ್ನೇ ಬಲಿ ಕೊಡಲು ಮುಂದಾದ ಮಂತ್ರವಾದಿ ತಂದೆ!!

ಸಮಗ್ರ ನ್ಯೂಸ್: ಪಾಪಿ ಮಂತ್ರವಾದಿ ತಂದೆಯೋರ್ವ ಮಗುವನ್ನು ನಿಧಿಗಾಗಿ ಬಲಿ ಕೊಡಲು ಮುಂದಾದ ಘಟನೆ ಬೆಂಗಳೂರಿನ ಕೆ ಆರ್ ಪುರಂ ನಲ್ಲಿ ನಡೆದಿದೆ. ಆರೋಪಿಯನ್ನು ಸದ್ದಾಂ ಎಂದು ಗುರುತಿಸಲಾಗಿದ್ದು, ಈತ ಮಾಟ‌-ಮಂತ್ರ ಮಾಡುತ್ತಿದ್ದುದಾಗಿ ತಿಳಿದುಬಂದಿದೆ.

Ad Widget ... ..

ನಿಧಿ ಆಸೆಗಾಗಿ ಕುಟ್ಟಿ ಸೈತಾನ್ ಪೂಜೆಯಲ್ಲಿ ತನ್ನ ಮಗುವನ್ನು ಬಲಿ ಕೊಡಲು ಮುಂದಾಗಿದ್ದು, ಬಲಿ ನೀಡುವಂತೆ ತನ್ನ ಪತ್ನಿಗೆ ಕಿರುಕುಳ ನೀಡಿದ್ದಾನೆ.‌ ಮಂತ್ರ ಪಠಿಸುತ್ತಾ ಸದ್ದಾಂ ತಡರಾತ್ರಿ ವಾಮಾಚಾರ ಅಭ್ಯಾಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

Ad Widget

ಪತಿ ಸದ್ದಾಂ ಕಿರುಕುಳಕ್ಕೆ ಬೇಸತ್ತು ಪತ್ನಿ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *