ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ದಿನದಿಂದಲೇ ರಾಜ್ಯದಲ್ಲಿ ಮತ್ತೆ ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಕ್ಟೋಬರ್ 31 ಮತ್ತು ನವೆಂಬರ್ 1 ರಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ನವೆಂಬರ್ 1ರಂದು ವ್ಯಾಪಕ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ಹೇಳಿದೆ. ಅದುವರೆಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯ ಸಾಧ್ಯತೆ ಇಲ್ಲ ಎಂದು ತಿಳಿಸಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇಲ್ಲವಾದರೂ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ದೀಪಾವಳಿ, ಕರ್ನಾಟಕ ರಾಜ್ಯೋತ್ಸವ ಸಂಭ್ರಮಕ್ಕೆ ಸಜ್ಜಾಗುತ್ತಿರುವ ಬೆಂಗಳೂರಿಗೆ ಮತ್ತೆ ಮಳೆ ಆತಂಕ ಶುರುವಾಗಿದೆ. ನವೆಂಬರ್ 1 ರಂದು ದಕ್ಷಿಣ ಒಳನಾಡು ಭಾಗದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಬಳ್ಳಾರಿ, ದಾವಣಗರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.