ರೈತರ ಹೊಲಗಳ ಬಳಿಕ ಇದೀಗ ಹಿಂದೂ ‘ಮಠ’ಗಳ ಭೂಮಿ ಕೂಡ ‘ವಕ್ಫ್’ ಆಸ್ತಿ!

ಸಮಗ್ರ ನ್ಯೂಸ್: ಜಿಲ್ಲೆಯ ಸಾವಿರಾರು ಎಕರೆ ಭೂಮಿ ವಕ್ಫ್ ಭೂಮಿಗೆ ಸೇರಿದ್ದು ಎಂದು ಸರ್ಕಾರದಿಂದ ರೈತರಿಗೆ ನೋಟಿಸ್‌ ನೀಡಿದ ವಿಚಾರವಾಗಿ, ನಿನ್ನೆ ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದರು.ಇದೀಗ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ವಿರಕ್ತ ಮಠದ ಆಸ್ತಿ ಕೂಡ ವಕ್ಸ್ ಗೆ ಆಸ್ತಿಗೆ ಸೇರಿದೆ ಎಂದು ಹೇಳಲಾಗುತ್ತಿದೆ.

. Ad Widget . Ad Widget

ಸರ್ವೆ ನಂ 1020 ರ ಅಸ್ತಿಯಲ್ಲಿ ಕಬರಸ್ಥಾನ ವಕ್ಸ್ ಬೋರ್ಡ್ ಎಂದು ನೋಂದಣಿಯಾಗಿದೆ.ಸಿದ್ದಲಿಂಗ ಸ್ವಾಮಿಜಿಗಳು ಈ ಮಠದ ಪೀಠಾಧಿಪತಿಗಳಾಗಿದ್ದಾಗ ಪಹಣಿಯ ಕಾಲಂ ನಂ 11 ಖಾಲಿ ಇತ್ತು. 2018-19 ರಲ್ಲಿ ಖಾಲಿ ಇದ್ದ ಕಲಂ ನಲ್ಲಿ ವಕ್ ಬೋರ್ಡ್ ಎಂದು ಸೇರ್ಪಡೆಯಾಗಿದೆ.

. Ad Widget . . Ad Widget . Ad Widget

13ನೇ ಶತಮಾನದಲ್ಲಿ ಸ್ಥಾಪನೆಯಾಗಿರುವ ಮಠ ಖಬರಸ್ಥಾನ ವಕ್ ಬೋರ್ಡ್ ಆಗಿದ್ದು ಹೇಗೆ? ವಕ್ಸ್ ಬೋರ್ಡ್‌ಗೆ 1.28 ಎಕರೆ ಆಸ್ತಿಯನ್ನು ಸೇರಿಸಿದ್ದಕ್ಕೆ ಮಠದ ಭಕ್ತರ ತೀವ್ರ ವಿರೋಧ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೆ ರೀತಿ ಸಿಂದಗಿ ತಾಲೂಕಿನಲ್ಲಿ ಅನೇಕ ಹಿಂದೂ ಮಠಗಳು ಆಸ್ತಿ ವಕ್ ಬೋರ್ಡ್ ಸೇರಿದೆ ಎಂಬ ಶಂಕೆಯನ್ನು ಭಕ್ತರು ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *