Ad Widget .

ಮಹಿಳೆಯರ ಉಚಿತ ಪ್ರಯಾಣಕ್ಕೆ ಬೀಳುತ್ತಾ ಕತ್ತರಿ| ‘ಶಕ್ತಿ’ ಯೋಜನೆ ಪರಿಷ್ಕರಣೆ ಸುಳಿವು ನೀಡಿದ ಡಿಸಿಎಂ

ಸಮಗ್ರ ನ್ಯೂಸ್: ರಾಜ್ಯದ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣ ಮಾಡುವ ʼಶಕ್ತಿʼ ಯೋಜನೆ ಪರಿಷ್ಕರಣೆ ಆಗುವ ಬಗ್ಗೆ ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಸುಳಿವು ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬಳಿ ಬುಧವಾರ(ಅ.30) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ 20 ನೂತನ ವೋಲ್ವೋ ಐರಾವತ ಕ್ಲಬ್‌ ಕ್ಲಾಸ್‌ 2.0 ಬಸ್ ಉದ್ಘಾಟಿಸಿ ಅವರು ಮಾತನಾಡಿದರು.

Ad Widget . Ad Widget .

ʼಅನೇಕ ಜನರು ನನಗೆ ಇ-ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ಧವಾಗಿದ್ದೇವೆ. ನಮಗೆ ಉಚಿತ ಪ್ರಯಾಣ ಬೇಡವೆಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್‌ಗೆ ದುಡ್ಡು ಕೊಡುತ್ತೇವೆ ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲವೆಂದು ಹೇಳುತ್ತಿದ್ದಾರೆ. ಅನೇಕರು ನಾವು ಟಿಕೆಟ್ ಹಣ ಕೊಡುವುದಕ್ಕೆ ಸಿದ್ಧವೆಂದು ಪ್ರಾಮಾಣಿಕವಾಗಿ ಅಭಿಪ್ರಾಯ ಹೇಳುತ್ತಿದ್ದಾರೆ. ಹೀಗಾಗಿ ನಾವು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸರ್ಕಾರದಲ್ಲಿ ಎಲ್ಲಾ ಕೂತು ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆʼ ಎಂದು ತಿಳಿಸಿದರು. ಪಂಚ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊಡೆತ ಅನುಭವಿಸುತ್ತಿರುವ ಕಾಂಗ್ರೆಸ್ ಸರ್ಕಾರ, ಇದೀಗ ಡಿಕೆಶಿ ಹೇಳಿಕೆಯಿಂದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸುಳಿವು ಕೊಟ್ಟಿದೆ.

Ad Widget . Ad Widget .

ಈ ಬಗ್ಗೆ ಟ್ವೀಟ್‌ ಮಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ʼರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಿದೆವು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಟರ್‌ಗಳು ಸ್ವೀಕರಿಸುತ್ತಿಲ್ಲವೆಂದು ಹೇಳುತ್ತಿದ್ದಾರೆʼ ಎಂದು ಹೇಳಿದ್ದಾರೆ.

ʼಸದ್ಯದಲ್ಲೇ ಈ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇವೆ. ವೋಲ್ವೋ ಬಸ್‌ಗಳು ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಸೇವೆಯನ್ನು ಒದಗಿಸುತ್ತಾ ಬಂದಿದ್ದು, ಅವಕಾಶ ಸಿಕ್ಕಾಗ ನಮ್ಮ ಸಂಪುಟದ ಸಹೋದ್ಯೋಗಿಗಳೆಲ್ಲಾ ಬಸ್‌ನಲ್ಲಿ ಒಟ್ಟಿಗೆ ಪ್ರಯಾಣ ಮಾಡುತ್ತೇವೆʼ ಎಂದು ತಿಳಿಸಿದ್ದಾರೆ.

Leave a Comment

Your email address will not be published. Required fields are marked *