October 2024

ಜಾತಿ ಗಣತಿ ಜಾರಿ/ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಎಂದು ಮುಖ್ಯಮಂತ್ರಿ

ಸಮಗ್ರ ನ್ಯೂಸ್‌: ಅಕ್ಟೋಬರ್ 18 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ಜಾರಿಗೊಳಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಾತಿ ಗಣತಿ ವರದಿ ಕುರಿತು ಇಂದು ಹಿಂದುಳಿದ ವರ್ಗಗಳ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ ನಂತರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಎಂಎಲ್ ಸಿ ಎನ್ ರವಿಕುಮಾರ್ ಸೇರಿದಂತೆ ಸುಮಾರು 30 ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು ಮತ್ತು ಸಾಮಾಜಿಕ ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ […]

ಜಾತಿ ಗಣತಿ ಜಾರಿ/ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಎಂದು ಮುಖ್ಯಮಂತ್ರಿ Read More »

ಕಡಬ: 5 ಜನರ ಮೇಲಿನ ರೌಡಿ ಶೀಟರ್ ಹೈಕೋರ್ಟ್ ನಲ್ಲಿ ರದ್ದು

ಸಮಗ್ರ ನ್ಯೂಸ್: ಕಡಬ ತಾಲೂಕಿನ 5 ಜನರ ಮೇಲೆ ಆಗಿನ ಕಡಬ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ರವರು ಸೆಕ್ಷನ್ 143,147,323,326,307,395 ಹಾಗೂ 149 IPC ಅಡಿಯಲ್ಲಿ ಕ್ಷುಲ್ಲಕ ಕಾರಣಗಳಿಗೆ ದೊಂಬಿ, ಗಲಾಟೆಗಳನ್ನು ಮಾಡುತ್ತಾ ಸಾರ್ವಜನಿಕ ಅಶಾಂತಿಯನ್ನು ಉಂಟು ಮಾಡುವ ಸಲುವಾಗಿ 2017 ರಲ್ಲಿ ರೌಡಿ ಶೀಟರ್ ದಾಖಲಿಸಿರುವುದು ಹೈಕೋರ್ಟ್ ನಲ್ಲಿ ರದ್ದುಗೊಂಡಿದೆ. ತಮ್ಮ ಮೇಲಿನ ರೌಡಿ ಶೀಟರ್ ಅನ್ನು ರದ್ದುಗೊಳಿಸುವಂತೆ ಕೋರಿ ಮಾನ್ಯ ಉಚ್ಚನ್ಯಾಯಾಲಯದ ಮೊರೆ ಹೋಗಿದ್ದ ಆರೋಪಿಗಳವಾದವನ್ನು ಆಲಿಸಿದ ಉಚ್ಚನ್ಯಾಯಾಲಯದ ನ್ಯಾಯಮೂರ್ತಿ ಹೇಮಂತ್ ಚಂದನ್

ಕಡಬ: 5 ಜನರ ಮೇಲಿನ ರೌಡಿ ಶೀಟರ್ ಹೈಕೋರ್ಟ್ ನಲ್ಲಿ ರದ್ದು Read More »

ಪೋಕ್ಸೋ ಪ್ರಕರಣ: ಚಿತ್ರದುರ್ಗ ಜೈಲಿನಿಂದ ಮುರುಘಾಶ್ರೀ ಬಿಡುಗಡೆ

ಸಮಗ್ರ ನ್ಯೂಸ್: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆಗೊಳಿಸಲು ನ್ಯಾಯಾಲಯ ಆದೇಶ ಹೊರಡಿಸಿದೆ. ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಆದೇಶವನ್ನು ಹೊರಡಿಸಿದೆ. ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಜಾಮೀನು ನೀಡಿತ್ತು. ಆದರೆ, ಸಾಕ್ಷ ವಿಚಾರಣೆ ನಡೆಸುವವರೆಗೆ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಆದೇಶಿಸಿತ್ತು. ಇದೀಗ, ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.

ಪೋಕ್ಸೋ ಪ್ರಕರಣ: ಚಿತ್ರದುರ್ಗ ಜೈಲಿನಿಂದ ಮುರುಘಾಶ್ರೀ ಬಿಡುಗಡೆ Read More »

ಕರಾವಳಿಯ ಅತೀದೊಡ್ಡ ಡ್ರಗ್‌ ಜಾಲ ಬಯಲಿಗೆ| ಸೈಬೀರಿಯಾ ಪ್ರಜೆಯ ಬಂಧನ| 6 ಕೋಟಿ ಮೌಲ್ಯದ ನಿಷೇಧಿತ ಡ್ರಗ್ಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರು ನಗರದಲ್ಲಿ ಬೃಹತ್‌ ಡ್ರಗ್‌ ಜಾಲವೊಂದು ಸೋಮವಾರ ಬಯಲಿಗೆ ಬಂದಿದೆ. ಬರೋಬ್ಬರಿ 6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್‌ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿ ಸೈಬಿರಿಯನ್‌ ಪ್ರಜೆ ಪೀಟರ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 6 ಕೆಜಿ ಡ್ರಗ್‌ ವಶಕ್ಕೆ ಪಡೆಯಲಾಗಿದ್ದು, ಮಂಗಳೂರಿನ ಇತಿಹಾಸದಲ್ಲೇ ಇದು ಅತಿದೊಡ್ಡ ಡ್ರಗ್‌ ವಶಕ್ಕೆ ಪಡೆದ ಪ್ರಕರಣ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಎಂಡಿಎಂಎ ಮಾರಾಟದ ವೇಳೆ ಹೈದರ್‌ ಅಲಿ ಎಂಬಾತನನ್ನು

ಕರಾವಳಿಯ ಅತೀದೊಡ್ಡ ಡ್ರಗ್‌ ಜಾಲ ಬಯಲಿಗೆ| ಸೈಬೀರಿಯಾ ಪ್ರಜೆಯ ಬಂಧನ| 6 ಕೋಟಿ ಮೌಲ್ಯದ ನಿಷೇಧಿತ ಡ್ರಗ್ಸ್ ವಶಕ್ಕೆ Read More »

ಚಿಕ್ಕಮಗಳೂರು: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರು ಮೂಲದ ಚಾಲಕ ಹೃದಯಾಘಾತದಿಂದ ಮೃತ್ಯು

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಹೋಮ್ ಸ್ಟೇವೊಂದಕ್ಕೆ ಬೆಂಗಳೂರಿನ ಪ್ರವಾಸಿಗರನ್ನು ಕರೆ ತಂದಿದ್ದ ಟಿಟಿ ವಾಹನದ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಅ.06 ರಂದು ವರದಿಯಾಗಿದೆ. ಬೆಂಗಳೂರಿನ ಸೋಮನಹಳ್ಳಿ ನಿವಾಸಿಯಾಗಿರುವ ಅವಿನಾಶ್(25) ರವರು ಅ.06 ರಂದು ಬೆಳಗ್ಗೆ ಬೆಂಗಳೂರಿನ ಪ್ರವಾಸಿಗರನ್ನು ಚಿಕ್ಕಮಗಳೂರಿಗೆ ಟಿಟಿ ವಾಹನದಲ್ಲಿ ಕರೆ ತಂದಿದ್ದಾನೆ.ಪ್ರವಾಸಿಗರನ್ನು ನಗರ ಸಮೀಪದ ಹೋಮ್ ಸ್ಟೇವೊಂದಕ್ಕೆ ಬಿಟ್ಟಿದ್ದು, ಕೆಲವೇ ಹೊತ್ತಿನಲ್ಲಿ ಚಾಲಕ ಹೃದಯಾಘಾತಕ್ಕೊಳಗಾಗಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆಂದು ತಿಳಿದು ಬಂದಿದೆ. ಘಟನೆ ಸಂಬಂಧ ಚಿಕ್ಕಮಗಳೂರು

ಚಿಕ್ಕಮಗಳೂರು: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರು ಮೂಲದ ಚಾಲಕ ಹೃದಯಾಘಾತದಿಂದ ಮೃತ್ಯು Read More »

ಅಬ್ಬರಿಸಿದ ಹಿಂಗಾರು ಮಳೆ| ವಿವಿಧೆಡೆ ಮಳೆ ಅವಘಡಕ್ಕೆ ಮೂವರು ಬಲಿ| 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಭಾನುವಾರ ಗುಡುಗು, ಸಿಡಿಲು ಸಹಿತ ಧಾರಾಕಾರ ಹಿಂಗಾರು ಮಳೆ ಸುರಿದಿದ್ದು, ಮಳೆ ಸಂಬಂಧಿ ಅವಘಡಗಳಿಗೆ ಮೂವರು ಬಲಿಯಾಗಿದ್ದಾರೆ. ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಮುದ್ರಾಡಿ ಬಲ್ಲಾಡಿ ಗ್ರಾಮದಲ್ಲಿ ಮಳೆ ಸಂದರ್ಭ ಮನೆಯಿಂದ ಹೊರಬಂದ ಚಂದ್ರು ಗೌಡ್ತಿ (90) ಎಂಬುವರು ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ದಶಮಾಪುರದಲ್ಲಿ ಭಾನುವಾರ ಮಧ್ಯಾಹ್ನ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಗ್ರಾಮದ ಬಣಕಾರ ನಾರಪ್ಪ (62) ಮತ್ತು ಬಣಕಾರ

ಅಬ್ಬರಿಸಿದ ಹಿಂಗಾರು ಮಳೆ| ವಿವಿಧೆಡೆ ಮಳೆ ಅವಘಡಕ್ಕೆ ಮೂವರು ಬಲಿ| 15 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ Read More »

ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

ಸಮಗ್ರ ನ್ಯೂಸ್: ಶಬರಿಮಲೆ ಯಾತ್ರೆಗೈಯ್ಯುವವರು ಈ ಬಾರಿ ಆನ್‌ಲೈನ್ ಬುಕ್ಕಿಂಗ್ ಮಾಡಿಕೊಳ್ಳುವುದು ಕಡ್ಡಾಯ. ಮಂಡಲ-ಮಕರವಿಳಕ್ಕು ಯಾತ್ರೆಗೆ ಪೂರ್ವಭಾವಿಯಾಗಿ ನಡೆದ ಸಭೆಯಲ್ಲಿ ಕೇರಳ ಸರಕಾರ ಈ ಸಲ ಯಾತ್ರಾರ್ಥಿಗಳಿಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯಗೊಳಿಸುವ ನಿರ್ಧಾರ ಕೈಗೊಂಡಿದೆ.ಪ್ರತಿದಿನ 80,000 ಭಕ್ತರಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ಸಿಗಲಿದೆ. ಭಕ್ತರು ಶಬರಿಮಲೆ ದೇಗುಲದ ವೆಬ್‌ಸೈಟ್‌ನಲ್ಲಿ ವರ್ಚುವಲ್‌ ಬುಕ್ಕಿಂಗ್ ಮಾಡಬೇಕಾಗುತ್ತದೆ.ಕಾಡಿನ ಮಾರ್ಗದಲ್ಲಿ ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ. ಈ ಸಲ ಶಬರಿಮಲೆಯಲ್ಲಿ ಸ್ಪಾಟ್ ಬುಕ್ಕಿಂಗ್ ಸೌಲಭ್ಯ ಇರುವುದಿಲ್ಲ.ಬುಕ್ಕಿಂಗ್ ರಹಿತರಾಗಿ

ಶಬರಿಮಲೆ ಯಾತ್ರೆಗೆ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ Read More »

ಮಂಗಳೂರು: ಕೂಳೂರು ಸೇತುವೆ ಬಳಿ ಮುಮ್ತಾಝ್ ಅಲಿ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಮಂಗಳೂರಿನ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಸಾಮಾಜಿಕ ಮುಂದಾಳು, ಉದ್ಯಮಿ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಕೂಡಲೇ ಅದನ್ನು ನಗರದ ಎಜೆ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ. ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಪತ್ತೆಯಾಗಿತ್ತು. ಅಲ್ಲದೆ, ಕಾರಿನ ಮುಂಭಾಗದ ಬಲ‌ಬದಿ ಅಪಘಾತ ನಡೆದಿರುವ ಕುರುಹುಗಳು ಪತ್ತೆಯಾಗಿತ್ತು. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ

ಮಂಗಳೂರು: ಕೂಳೂರು ಸೇತುವೆ ಬಳಿ ಮುಮ್ತಾಝ್ ಅಲಿ ಮೃತದೇಹ ಪತ್ತೆ Read More »

10ನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿಗೆ ಅವಕಾಶ

ಸಮಗ್ರ ನ್ಯೂಸ್: ರೆಗ್ಯುಲ‌ರ್ ಶಾಲಾ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಆಯಾ ವರ್ಷದಲ್ಲಿ ಪರೀಕ್ಷೆ-1 ಮತ್ತು ಪರೀಕ್ಷೆ-2 ಇವುಗಳನ್ನು ಬರೆದು ಅಂತಿಮವಾಗಿ ಅನುತ್ತೀರ್ಣರಾದಲ್ಲಿ ಪುನಃ ಮುಂದಿನ ಒಂದು ಶೈಕ್ಷಣಿಕ ವರ್ಷದಲ್ಲಿ ಶಾಲಾ ಅಭ್ಯರ್ಥಿಯಾಗಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ಪ್ರವೇಶ ಪಡೆಯಲು ಇಚ್ಛಿಸಿದಲ್ಲಿ ಮರು ದಾಖಲಾತಿಗೆ ಅವಕಾಶ ನೀಡಲಾಗುತ್ತದೆ. ಇತರೆ ವಿದ್ಯಾರ್ಥಿಗಳಂತೆ ಶಾಲೆಯಲ್ಲಿ ಪೂರ್ಣಾವಧಿ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮತ್ತು ಎಲ್ಲಾ ವಿಷಯದ ತರಗತಿಗೆ ಪೂರ್ಣಾವಧಿ ಹಾಜರಾಗಬೇಕು. ಈ ರೀತಿ ಪೂರ್ಣಾವಧಿ ಅಧ್ಯಯನ ಮಾಡಿ ಹಿಂದಿನ ವರ್ಷ ಅನುತ್ತೀರ್ಣರಾದ

10ನೇ ತರಗತಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಮರು ದಾಖಲಾತಿಗೆ ಅವಕಾಶ Read More »

Helth tips: ರಾಮಫಲ ಹಣ್ಣಿನ ಆರೋಗ್ಯ ಉಪಯೋಗಗಳು

ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ರಾಮಫಲ ರಕ್ತದಲ್ಲಿನ ಗ್ಲೋಕೋಸ್‌ನ್ನು ಕಡಿಮೆ ಮಾಡುವ ಗುಣವನ್ನು ಹೊಂದಿರುವುದರಿಂದ ಮಧುಮೇಹ ಪೀಡಿತರಿಗೆ ಇದು ಪ್ರಯೋಜನಕಾರಿ.ಇದು ಮಧುಮೇಹಕ್ಕೆ ಪರಿಪೂರ್ಣವಾದ ಖನಿಜಗಳನ್ನು ಹೊಂದಿರುತ್ತದೆ. ಇದು ಕ್ಯಾನ್ಸರ್ ವಿರೋಧಿ ಗುಣಗಳನ್ನು ಸಹ ಹೊಂದಿದೆ. ಸಿಹಿಯ ವಿಷಯಕ್ಕೆ ಬಂದರೆ, ಸೀತಾಫಲಕ್ಕಿಂತ ರಾಮಹಣ್ಣು ಕಡಿಮೆ ಸಿಹಿಯಾಗಿರುತ್ತದೆ. ಅದಕ್ಕಾಗಿಯೇ ಮಧುಮೇಹಿಗಳು ಈ ಹಣ್ಣನ್ನು ತಿನ್ನಬಹುದು.ಇದರ ಪೋಷಕಾಂಶಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ರಾಮ ಫಲದಲ್ಲಿ ವಿಟಮಿನ್ ಬಿ ಮತ್ತು ವಿಟಮಿನ್ ಸಿ ಅಧಿಕವಾಗಿದೆ. ನಿಮ್ಮ ಚರ್ಮ ಮತ್ತು ಕೂದಲು

Helth tips: ರಾಮಫಲ ಹಣ್ಣಿನ ಆರೋಗ್ಯ ಉಪಯೋಗಗಳು Read More »