October 2024

ಇಬ್ಬರು ಯುವಕರು ಕುಂದಾಪುರ ಬೀಚ್‌’ನಲ್ಲಿ ಮುಳುಗಿ ಸಾವು

ಸಮಗ್ರ ನ್ಯೂಸ್: ಬೆಂಗಳೂರಿನ ಇಬ್ಬರು ಯುವಕರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬೀಜಾಡಿಯಲ್ಲಿ ನಡೆದಿದೆ.ಬೀಜಾಡಿಯ ರೆಸಾರ್ಟ್ ನಲ್ಲಿ ತಂಗಿದ್ದರು. ಮರುದಿನ ಬೀಜಾಡಿ ಸಮುದ್ರಕ್ಕೆ ಈಜಲು ಹೋದ 4-5 ಯುವಕರ ಪೈಕಿ ಇಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಸದ್ಯ, ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಶುಭ ಕಾರ್ಯದ ನಿಮಿತ್ತ ಉಡುಪಿಗೆ ತೆರಳಿದ್ದ ಯುವಕರು ಬೀಚ್ ಗೆ ತೆರಳಿದ್ದರು ಎನ್ನಲಾಗಿದೆ.

ಇಬ್ಬರು ಯುವಕರು ಕುಂದಾಪುರ ಬೀಚ್‌’ನಲ್ಲಿ ಮುಳುಗಿ ಸಾವು Read More »

ಮಂಗಳೂರಲ್ಲಿ ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಸಮಗ್ರ ನ್ಯೂಸ್: ರಿಯಲ್ ಎಸ್ಟೆಟ್ ಉದ್ಯಮಿಯೋರ್ವರು ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಆರೋಪಿ ವಿರುದ್ಧ ಸಂತ್ರಸ್ಥೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದಾರೆ. ಬಿಲ್ಡರ್ ನನ್ನು ರಶೀದ್ ಎಂದು ಹೇಳಲಾಗುತ್ತಿದ್ದೆ.ಮಹಿಳೆ ನೀಡಿದ ದೂರಿನಲ್ಲಿ ಕುಶಾಲನಗರದಲ್ಲಿ ಒಳ್ಳೆಯ ಸೈಟ್ ಇದ್ದು ಅದನ್ನು ಖರೀದಿ ಮಾಡಬಹುದು ಎಂದು ರಶೀದ್‌ ಹೇಳಿದಾಗ ಅದಕ್ಕೆ ಒಪ್ಪಿದ್ದೆ. ಅ.21ರಂದು ರಶೀದ್‌ ಕಾರಿನಲ್ಲಿ ಕುಶಾಲನಗರಕ್ಕೆ ಕರೆದೊಯ್ದಿದ್ದರು. ಅಲ್ಲಿನ ಹೊಟೇಲ್‌ನಲ್ಲಿ ಇಬ್ಬರಿಗೆ ಪ್ರತ್ಯೇಕ ರೂಮ್ ಬುಕ್

ಮಂಗಳೂರಲ್ಲಿ ಸೈಟ್ ತೋರಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ Read More »

ರಾಜ್ಯ ಸರ್ಕಾರಿ ನೌಕರರೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್‌ ಮಾಡದಿದ್ದರೆ ಸಿಗಲ್ಲ ಈ ಸೌಲಭ್ಯಗಳು!

ಸಮಗ್ರ ನ್ಯೂಸ್: ಕಂಪ್ಯೂಟ‌ರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಗದಿಪಡಿಸಿದ್ದ ಕಾಲಾವಧಿಯನ್ನು ದಿನಾಂಕ ಡಿ.31ರ ವರೆಗೆ ವಿಸ್ತರಿಸಲಾಗಿದ್ದು, ಈ ಅವಧಿಯೊಳಗೆ ಪರೀಕ್ಷೆ ಉತ್ತೀರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ.ಈ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರೆ ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್‌ ಮಾಡದಿದ್ದರೆ ಸಿಗಲ್ಲ ಈ ಸೌಲಭ್ಯಗಳು! Read More »

ಮಂಗಳೂರು: 24 ತುಂಡು ಮಾಡುತ್ತೇನೆ ಎಂದು ಮೆಸೇಜ್ ಹಾಕಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ನನ್ನ ಜೊತೆ ಸಹಕರಿಸು ಇಲ್ಲದಿದ್ದರೆ 24 ಪೀಸ್ ಗಳನ್ನಾಗಿ ಮಾಡುತ್ತೇನೆ ಎಂದು ಯುವತಿಗೆ ಬೆದರಿಕೆ ಹಾಕಿದ ಯುವಕನನ್ನು ಅರೆಸ್ಟ್ ಮಾಡಿರುವ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ. ಶಾರೀಕ್ ಬಂಧಿತ ಆರೋಪಿ. ಆರೋಪಿ ಇಡ್ಯಾ ಪರಿಸರದ ಯುವತಿಯೊಬ್ಬಳ ಫೇಸ್ ಬುಕ್ ಖಾತೆಯನ್ನು ಹ್ಯಾಕ್ ಮಾಡಿ ಆಕೆಯ ಅಣ್ಣನಿಗೆ ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಬೆದರಿಕೆ ಸಂದೇಶ ಕಳುಹಿಸಿದ್ದ. ಈ ಹಿನ್ನಲೆ ಯುವತಿ ಸುರತ್ಕಲ್ ಪೊಲೀಸ್

ಮಂಗಳೂರು: 24 ತುಂಡು ಮಾಡುತ್ತೇನೆ ಎಂದು ಮೆಸೇಜ್ ಹಾಕಿದ್ದ ಆರೋಪಿ ಅರೆಸ್ಟ್ Read More »

ಸರ್ಕಾರಿ ನೌಕರರೇ: ‘ನಿವೃತ್ತಿ’ ಸಂಬಂಧಿತ ನಿಯಮ ಬದಲಾವಣೆ, ‘ಹೊಸ ರೂಲ್’

ಸಮಗ್ರ ನ್ಯೂಸ್: ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಅಡಿಯಲ್ಲಿ ಕೇಂದ್ರ ಸರ್ಕಾರಿ ನೌಕರರ ಸ್ವಯಂ ನಿವೃತ್ತಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನ ಹೊರಡಿಸಲಾಗಿದೆ, ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯ (DoP&PW) ಕಚೇರಿಯ ಮೆಮೊರಾಂಡಮ್ ಪ್ರಕಾರ, 20 ವರ್ಷಗಳ ನಿಯಮಿತ ಸೇವೆಯನ್ನು ಪೂರ್ಣಗೊಳಿಸಿದ ನೌಕರರು ನೇಮಕಾತಿ ಪ್ರಾಧಿಕಾರಕ್ಕೆ ಮೂರು ತಿಂಗಳ ನೋಟಿಸ್ ನೀಡುವ ಮೂಲಕ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಬಹುದು. ಈ ಕಚೇರಿ ಜ್ಞಾಪಕ ಪತ್ರವನ್ನು ಅ. 11 ರಂದು ನೀಡಲಾಗಿದೆ. ಹೊಸ ನಿಯಮಗಳ ಪ್ರಕಾರ, ಒಬ್ಬ ಉದ್ಯೋಗಿ

ಸರ್ಕಾರಿ ನೌಕರರೇ: ‘ನಿವೃತ್ತಿ’ ಸಂಬಂಧಿತ ನಿಯಮ ಬದಲಾವಣೆ, ‘ಹೊಸ ರೂಲ್’ Read More »

ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹೋಟ್’ ಆರೋಗ್ಯ ಸಮಸ್ಯೆ,ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ತೀವ್ರ ತರದ ವೈರಲ್ ಫೀವರ್ ನಿಂದ ಬಳಲುತ್ತಿದ್ದು, ಈ ಹಿನ್ನಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಕರ್ನಾಟಕ ‘ರಾಜ್ಯಪಾಲ ಥಾವರ್ ಚಂದ್ ಗೆಹೋಟ್’ ಆರೋಗ್ಯ ಸಮಸ್ಯೆ,ಆಸ್ಪತ್ರೆಗೆ ದಾಖಲು Read More »

ಕೆಲಸದ ಒತ್ತಡ ತಾಳಲಾರದೇ ಸಾಫ್ಟ್’ವೇ‌ರ್ ಇಂಜಿನಿಯ‌ರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಕೆಲಸದ ಒತ್ತಡದಿಂದಾಗಿ ಸಾಫ್ಟ್ ವೇ‌ರ್ ಎಂಜಿನಿಯ‌ರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಕಾಪೇಟೆಯಲ್ಲಿ ನಡೆದಿದೆ. ಅವರು ಏಳು ಅಂತಸ್ತಿನ ಕಟ್ಟಡದ ಛಾವಣಿಯಿಂದ ಹಾರಿ ಸಾವನ್ನಪ್ಪಿದ್ದಾರೆ. ನಾಗ ಪ್ರಭಾಕರ್ ಆಂಧ್ರಪ್ರದೇಶ ಮೂಲದವರಾಗಿದ್ದು, ಗಚಿಬೌಲಿಯ ಸಾಫ್ಟ್ರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಕೋಕಾಪೇಟೆಯ ಹಾಸ್ಟೆಲ್‌ ಕೋಣೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಗ ಪ್ರಭಾಕ‌ರ್ ಅವರ ಆತ್ಮಹತ್ಯೆಯ ಹಿಂದಿನ ಕಾರಣಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೆಲಸದ ಒತ್ತಡದಿಂದಾಗಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಕೆಲಸದ ಒತ್ತಡ ತಾಳಲಾರದೇ ಸಾಫ್ಟ್’ವೇ‌ರ್ ಇಂಜಿನಿಯ‌ರ್ ಆತ್ಮಹತ್ಯೆ Read More »

ಶಿಗ್ಗಾಂವಿ: ಬಂಡಾಯ ಶಮನಕ್ಕೆ ತೆರಳಿದ್ದ ಸಚಿವ ಜಮೀರ್ ಕಾರಿಗೆ ಕಲ್ಲೇಟು

ಸಮಗ್ರ ನ್ಯೂಸ್: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಖಂಡರ ನಡುವೆ ತಿಕ್ಕಾಟ ಶುರುವಾಗಿದ್ದು, ಸಚಿವ ಝಮೀರ್ ಅಹ್ಮದ್ ಖಾನ್ ಅವರ ಕಾರಿನ ಮೇಲೆ ಕೆಲ ಕಾರ್ಯಕರ್ತರು ಹುಲಗೂರಿನಲ್ಲಿ ಕಲ್ಲು ತೂರಾಟ ನಡೆಸಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವ ಸೈಯದ್ ಅಜ್ಜಂಪೀರ್ ಖಾದ್ರಿ ಅವರ ಮನವೋಲಿಸಲು ಝಮೀರ್ ಅಹ್ಮದ್ ಅವರು ಮನೆಗೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಅವರು ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಅವರ ಕಾರಿನಲ್ಲಿ ಹೋಗಿದ್ದರು. ಟಿಕೆಟ್ ಕೈ ತಪ್ಪಿದ್ದರಿಂದ ಆಕ್ರೋಶಗೊಂಡಿರುವ ಸೈಯದ್ ಖಾದ್ರಿ ಪರ ಬೆಂಬಲಿಗರು,

ಶಿಗ್ಗಾಂವಿ: ಬಂಡಾಯ ಶಮನಕ್ಕೆ ತೆರಳಿದ್ದ ಸಚಿವ ಜಮೀರ್ ಕಾರಿಗೆ ಕಲ್ಲೇಟು Read More »

ಕರ್ನಾಟಕಕ್ಕೆ ಪ್ರತ್ಯೇಕ ನಾಡ ಧ್ವಜಕ್ಕೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ರಾಜ್ಯಕ್ಕೆ ಪ್ರತ್ಯೇಕ ಧ್ವಜ ಹೊಂದುವ ಕುರಿತು ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕರ್ನಾಟಕ ಹೈಕೋರ್ಟ್‌ ಇಂದು ವಜಾ ಮಾಡಿದೆ. ಬೆಳಗಾವಿಯ ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಎಂಬುವವರು ಸಲ್ಲಿಸಿದ್ದ ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ. ಅಂಜಾರಿಯಾ ಮತ್ತು ನ್ಯಾ.ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠ ಪಿಐಎಲ್ ವಜಾಗೊಳಿಸಿ ಆದೇಶಿಸಿದೆ. ಮಾ.8ರಂದು (2018) ಸಿಎಂ ಸಿದ್ದರಾಮಯ್ಯ ಅವರು ಹಳದಿ, ಬಿಳಿ ಮತ್ತು ಕೆಂಪು ವರ್ಣಗಳ

ಕರ್ನಾಟಕಕ್ಕೆ ಪ್ರತ್ಯೇಕ ನಾಡ ಧ್ವಜಕ್ಕೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಸುರತ್ಕಲ್: ಮುಸ್ಲಿಂ ಯುವಕನಿಂದ ಆಘಾತಕಾರಿ ಸಂದೇಶ| ಆತ ಕತ್ತರಿಸುವ ಬದಲು ಸಾವು ಮೇಲೆಂದು ಆತ್ಮಹತ್ಯೆಗೆ ಯತ್ನಿಸಿದ ಯುವತಿ| ಪೊಲೀಸ್ ಇಲಾಖೆ ವಿರುದ್ಧ ಶಾಸಕ ಭರತ್ ಶೆಟ್ಟಿ ಆಕ್ರೋಶ

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣದಲ್ಲಿ ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಗೆ ಅಶ್ಲೀಲ ಮೆಸೇಜ್ ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ್ದ ಇಡ್ಯಾ ನಿವಾಸಿ ಶಾರಿಕ್‌ ನೂರ್ಜಹಾನ್‌ ಎಂಬವರವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಪೊಲೀಸ್ ವೈಫಲ್ಯದ ವಿರುದ್ಧ ಶಾಸಕ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಠಾಣೆಯಲ್ಲಿ ಯುವತಿಯ ಕುಟುಂಬಸ್ಥರು ದೂರು ದಾಖಲಿಸುವ ಸಂದರ್ಭ

ಸುರತ್ಕಲ್: ಮುಸ್ಲಿಂ ಯುವಕನಿಂದ ಆಘಾತಕಾರಿ ಸಂದೇಶ| ಆತ ಕತ್ತರಿಸುವ ಬದಲು ಸಾವು ಮೇಲೆಂದು ಆತ್ಮಹತ್ಯೆಗೆ ಯತ್ನಿಸಿದ ಯುವತಿ| ಪೊಲೀಸ್ ಇಲಾಖೆ ವಿರುದ್ಧ ಶಾಸಕ ಭರತ್ ಶೆಟ್ಟಿ ಆಕ್ರೋಶ Read More »