October 2024

ಬಿಎಂಟಿಸಿ ಕಂಡಕ್ಟ‌ರ್ ಹತ್ಯೆಗೆ ಯತ್ನಿಸಿದ ಪ್ರಯಾಣಿಕ

ಸಮಗ್ರ ನ್ಯೂಸ್: ಕಲ್ಲಿನಿಂದ ಬಿಎಂಟಿಸಿ ಕಂಡಕ್ಟರ್ ತಲೆ ಜಜ್ಜಲು ಪ್ರಯಾಣಿಕ ಬಂದಿದ್ದ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಸಂಗಪ್ಪ ಪ್ರಾಣಾಪಾಯದಿಂದ ಪಾರಾದ ಕಂಡಕ್ಟರ್ ಹಾಗೂ ಹೇಮಂತ್ ಆರೋಪಿ. ಕಳೆದ ಶುಕ್ರವಾರ ಟಿನ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದೆ.ಮೂರು ದಿನದ ಹಿಂದೆ ಪಾಸ್ ತೋರಿಸುವ ವಿಚಾರಕ್ಕೆ ಕಂಡಕ್ಟ‌ರ್ ಮತ್ತು ಪ್ರಯಾಣಿಕನ ನಡುವೆ ಕಿರಿಕ್ ಆಗಿತ್ತು.ಆ ವೇಳೆ ಕಂಡಕ್ಟ‌ರ್ ಸಂಗಪ್ಪನ ಹೊಟ್ಟೆಗೆ ಗುದ್ದಿ ಆರೋಪಿ ಹೇಮಂತ್ ಎಸ್ಕೆಪ್ ಆಗಿದ್ದ.ಅದಾದ ಬಳಿಕ ಮೂರು ದಿನಗಳಿಂದ ಕಂಡಕ್ಟರ್ ಮೇಲೆ ಹಲ್ಲೆ ಮಾಡಲು ಹೇಮಂತ್ […]

ಬಿಎಂಟಿಸಿ ಕಂಡಕ್ಟ‌ರ್ ಹತ್ಯೆಗೆ ಯತ್ನಿಸಿದ ಪ್ರಯಾಣಿಕ Read More »

ದೋಸೆ ಗಂಟಲಿನಲ್ಲಿ ಸಿಲುಕಿ ಪ್ರಾಣ ಬಿಟ್ಟ ವ್ಯಕ್ತಿ

ಸಮಗ್ರ ನ್ಯೂಸ್: ವೆಂಕಟಯ್ಯ(43)ಪಟ್ಟಣದ ಸುಭಾಷನಗರ ನಿವಾಸಿಯಾಗಿರುವ ಈತ ದೋಸೆ ಗಂಟಲಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.ನಾಗ‌ರ್ ಕರ್ನೂಲ್ ಜಿಲ್ಲೆಯ ಕಲ್ವಕುರ್ತಿಯಲ್ಲಿ ಈ ಘಟನೆ ನಡೆದಿದೆ. ಕುಟುಂಬದವರು ಹೇಳುವ ಪ್ರಕಾರ,ವೆಂಕಟಯ್ಯ ಮದ್ಯ ಸೇವಿಸಿ ನಂತ್ರ ದೋಸೆ ತಿನ್ನುತ್ತಿದ್ದನು. ಈ ಅನುಕ್ರಮದಲ್ಲಿ, ದೋಸೆ ಗಂಟಲಿಗೆ ಸಿಲುಕಿಕೊಂಡು ಉಸಿರಾಡಲು ಸಾಧ್ಯವಾಗಲಿಲ್ಲ. ನೀರು ಕುಡಿಯುವಾಗ ಪಕ್ಕಕ್ಕೆ ಬಿದ್ದು ಪ್ರಜ್ಞಾಹೀನರಾದರು. ಕೂಡಲೇ ಆಸ್ಪತ್ರೆಗೆ ಸಾಗಿಸಿದಾಗ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಮನೆಯ ಯಜಮಾನ ಕಣ್ಣೆದುರೇ ಸಾವನ್ನಪ್ಪಿದ್ದಾನೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ. ವೆಂಕಟಯ್ಯ ಅವರಿಗೆ ಪತ್ನಿ ಹಾಗೂ

ದೋಸೆ ಗಂಟಲಿನಲ್ಲಿ ಸಿಲುಕಿ ಪ್ರಾಣ ಬಿಟ್ಟ ವ್ಯಕ್ತಿ Read More »

ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

ಸಮಗ್ರ ನ್ಯೂಸ್: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟ ಮಾಡಲು ನಿಗದಿಗೊಳಿಸಿದ ಕೆಲವು ಸ್ಥಳಗಳು ಚರ್ಚೆಗೆ ಕಾರಣವಾಗಿವೆ.ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ, ಟೆಂಡರ್ ಪ್ರಕ್ರಿಯೆಗೆ ಬುಧವಾರ ಮಂಗಳೂರಿನ ನೆಹರೂ ಮೈದಾನಕ್ಕೆ ಪಾಲಿಕೆ ಅಧಿಕಾರಿಗಳು ಆಗಮಿಸಿದ್ದು, ಈ ವೇಳೆ ಕ್ರಿಕೆಟ್ ಅಸೋಸಿಯೇಶನ್‌ನಿಂದ ವಿರೋಧ ವ್ಯಕ್ತವಾಗಿದೆ. ಗೀತಾಂಜಲಿ ಅವರು ಮಾಧ್ಯಮದ ಜತೆ ಮಾತನಾಡಿ, “ಮೈದಾನದಲ್ಲಿ ಪಟಾಕಿ ಅಂಗಡಿ ತೆರೆಯಲು ಟೆಂಡ‌ರ್ ಇದ್ದು ಗೇಟ್‌ ತೆರೆಯುವಂತೆ ಪಾಲಿಕೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ನೆಹರೂ ಮೈದಾನವನ್ನು ಆಟೋಟ

ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ Read More »

ಮಂಗಳೂರು: ಪಿಕಪ್ – ಆಟೋ ನಡುವೆ ಭೀಕರ ಅಪಘಾತ| ಶಾಲಾ ಬಾಲಕಿ ದುರ್ಮರಣ

ಸಮಗ್ರ ನ್ಯೂಸ್: ಶಾಲಾ ಮಕ್ಕಳ ಪಿಕಪ್ ವಾಹನ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಲ್ಲಪಾದೆ ಬಳಿ ನಡೆದಿದೆ. ದೇರಳಕಟ್ಟೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಆಯಿಷಾ ವಹಿದಾ (10) ಮೃತ ವಿದ್ಯಾರ್ಥಿನಿ. ಬಡಕಬೈಲು ಮೊಹಮ್ಮದ್ ಮುನ್ಸಿಯಾ ದಂಪತಿಯ ಪುತ್ರಿ ಮೃತ ಬಾಲಕಿ. ಮದಕ ಕಡೆಯಿಂದ ದೇರಳಕಟ್ಟೆ ಕಡೆಗೆ ಬರುತ್ತಿದ್ದ ಆಟೋ ಕಲ್ಲಪಾದೆ ಬಳಿ ವೇಗವಾಗಿ ಬಂದ ಪಿಕಪ್ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಸ್ಥಳದಲ್ಲೇ

ಮಂಗಳೂರು: ಪಿಕಪ್ – ಆಟೋ ನಡುವೆ ಭೀಕರ ಅಪಘಾತ| ಶಾಲಾ ಬಾಲಕಿ ದುರ್ಮರಣ Read More »

ವಿಧಾನ ಪರಿಷತ್ ಉಪಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಭರ್ಜರಿ‌ ಗೆಲುವು

ಸಮಗ್ರ ನ್ಯೂಸ್: ದ.ಕ‌ ಜಿಲ್ಲೆಯಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅವರು 1693 ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಿಶೋರ್ ಕುಮಾರ್ ಅವರು ಎಂ.ಎ. ಸ್ನಾತಕೋತ್ತರ ಪದವೀಧರರಾಗಿದ್ದು, ಅವರ ವಿದ್ಯಾರ್ಥಿ ಜೀವನದಿಂದಲೇ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದವರು. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಲ್ಲಿ (ಎಬಿವಿಪಿ) ವಿವಿಧ ಹುದ್ದೆಗಳಲ್ಲಿ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಪ್ರಸ್ತುತ ಅವರು ದ.ಕ. ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೋಟ ಶ್ರೀನಿವಾಸ ಪೂಜಾರಿ

ವಿಧಾನ ಪರಿಷತ್ ಉಪಚುನಾವಣೆ| ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿಗೆ ಭರ್ಜರಿ‌ ಗೆಲುವು Read More »

ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

ಸಮಗ್ರ ನ್ಯೂಸ್ : ಸುರತ್ಕಲ್ಲಿನ ಮುಕ್ಕ ರೆಡ್ ರಾಕ್ ಕಡಲ ಕಿನಾರೆಯ ನೀರಿನಲ್ಲಿ ಸುಮಾರು 8 ಮಂದಿ ಸ್ನೇಹಿತರೊಂದಿಗೆ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಅ.22 ರಂದು ರಾತ್ರಿ ನಡೆದಿದೆ.ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನಿವಾಸಿ, ಕೃಷ್ಣಕುಮಾ‌ರ್ ಸೋಮಯಾಜಿ ಅವರ ಪುತ್ರ ಪ್ರಜ್ವಲ್ (21). ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಗೆ ಸಂಬಂಧಿಸಿ ಯುವಕನ ಸಂಬಂಧಿಕರು ಸುರತ್ಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ

ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು Read More »

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ದಿನಸಿ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧಾರ..!

ಸಮಗ್ರ ನ್ಯೂಸ್: ಇನ್ಮುಂದೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಈ ಕುರಿತು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಘೋಷಣೆ ಮಾಡಿದ್ದಾರೆ.ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ ಎಣ್ಣೆ, ಬೇಳೆ, ಕಾಳು ಒಳಗೊಂಡಂತಹ ದಿನಸಿ ಕಿಟ್ ನೀಡಲು ಸರ್ಕಾರ ನಿರ್ಧರಿಸಿದೆ.ಅನ್ನಭಾಗ್ಯದ ಹಣ ಡಿಬಿಟಿ ಫಲಾನುಭವಿಗಳ ಖಾತೆಗೆ ಸರಿಯಾಗಿ ಸಮಯಕ್ಕೆ ಜಮಾ ಆಗದಿರುವ ಹಿನ್ನೆಲೆ ಅನ್ನಭಾಗ್ಯದ ಹಣದ ಬದಲು ಆಹಾರದ ಕಿಟ್ ನೀಡಲು

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಹಣದ ಬದಲು ದಿನಸಿ ಕಿಟ್ ನೀಡಲು ರಾಜ್ಯ ಸರ್ಕಾರ ನಿರ್ಧಾರ..! Read More »

ನ.01: ರಾಜ್ಯಾದ್ಯಂತ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ| ಆದೇಶ‌ ಹೊರಡಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ನವೆಂಬರ್ 1ರಂದು ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳು, ಐಟಿ, ಬಿಟಿ ಸಂಸ್ಥೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಟಿಪ್ಪಣಿ

ನ.01: ರಾಜ್ಯಾದ್ಯಂತ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಕಡ್ಡಾಯ| ಆದೇಶ‌ ಹೊರಡಿಸಿದ ರಾಜ್ಯ ಸರ್ಕಾರ Read More »

ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರ ದೀಪಾವಳಿ ಹಬ್ಬಕ್ಕೆ ಜನಸಾಮಾನ್ಯರಿಗೊಂದು ಸಿಹಿ ಸುದ್ದಿಯೊಂದು ನೀಡಿದೆ. ಹೌದು.. ದೀಪಾವಳಿ ಹಬ್ಬದ ವೇಳೆ ಆಹಾರ ಧಾನ್ಯ ಬೆಲೆ ನಿಯಂತ್ರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಗ್ರಾಹಕರಿಗೆ ಎಂಆರ್ಪಿ ದರದಲ್ಲಿ ವಿತರಿಸಲು ಮುಂದಾಗಿದೆ. ನವದೆಹಲಿಯಲ್ಲಿ ಎಂಆರ್ಪಿ ದರದಲ್ಲಿ ಭಾರತ್ ಅಕ್ಕಿ, ಬೇಳೆ-ಕಾಳು ಪೂರೈಕೆಗೆ ಕ್ರಮ ಕೈಗೊಂಡಿದ್ದು, ಈ ಮೂಲಕ ಗ್ರಾಹಕರಿಗೆ ಬೆಲೆ ಏರಿಕೆ ಹೊರೆ ತಗ್ಗಿಸಲು ಕ್ರಮ ಕೈಗೊಂಡಿದೆ. ಈ ಬಗ್ಗೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

ಜನಸಾಮಾನ್ಯರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗಿಫ್ಟ್ Read More »

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ.. ಬಿಬಿಎಂಪಿ ಅಧಿಕಾರಿ ಅಮಾನತು

ಸಮಗ್ರ ನ್ಯೂಸ್: ಬಾಬುಸಾಬ್‌ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ನಿನ್ನೆ ದುರಂತ ಸಂಭವಿಸಿದ್ದು. ಇದರಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬಿಬಿಎಂಪಿ (BBMP) ಹೊರಮಾವು ಉಪವಿಭಾಗದ ಎಇಇ ಕೆ.ವಿನಯ್ ಅಮಾನತುಗೊಳಿಸಿ ಬಿಬಿಎಂಪಿ ಮುಖ್ಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದೆ. ಕಟ್ಟಡ ತೆರವಿಗೆ ಸ್ಥಿರೀಕರಣ ಆದೇಶ ಹೊರಡಿಸಿದ್ದರೂ ಎಇಇ ಕೆ.ವಿನಯ್ ನಿಗದಿತ ಅವಧಿಯೊಳಗೆ ಕ್ರಮಕೈಗೊಂಡಿಲ್ಲ. ಇದರಿಂದ 8 ಕಾರ್ಮಿಕರ ಸಾವಿಗೆ ಕಾರಣಕರ್ತರಾಗಿದ್ದಾರೆ. ಹೀಗಾಗಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿತ.. ಬಿಬಿಎಂಪಿ ಅಧಿಕಾರಿ ಅಮಾನತು Read More »