ಸಮಗ್ರ ನ್ಯೂಸ್: ಜಿಲ್ಲೆಯಾದ್ಯಂತ ಸುವರ್ಣ ಕರ್ನಾಟಕ ರಾಜ್ಯೋತ್ಸವವನ್ನು, ಸಂಭ್ರಮ, ಸಡಗರರಿಂದ ಅದ್ದೂರಿಯಾಗಿ ಆಚರಿಸಲಾಯಿತು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಧ್ವಜಾರೋಹಣ ನೆರವೇರಿಸಿದರು.
ಭಾರತಕ್ಕೆ ಬಲವಾಗಿ ಚಿರಕಾಲ ಬೆಳಗಲಿ ಕನ್ನಡದ ದೀಪ, ಉಳಿಸೋಣ, ಬೆಳೆಸೋಣ ಕನ್ನಡ ಎಂದು ಹೇಳಿದರು.ಪೊಲೀಸ್, ಸೈಟ್ ಮತ್ತು ಗೈಡ್ಸ್, ಎನ್ ಸಿಸಿ, ಎನ್ ಎಸ್ ಎಸ್, ಗೃಹ ರಕ್ಷಕ ದಳ, ಸೇವಾ ದಳ ಸೇರಿದಂತೆ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.
ರಾಜ್ಯೋತ್ಸವ ಅಂಗವಾಗಿ ಜಿಲ್ಲೆಯ ವಿವಿಧ ಕ್ಷೇತ್ರದ 25 ಸಾಧಕರಿಗೆ ಸನ್ಮಾನಿಸಲಾಯಿತು.ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮೇಯರ್ ಮೆಹಜಬಿನ್ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯ್ತಿ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಪಾಲ್ಗೊಂಡಿದ್ದರು.