Ad Widget .

ಬಂಟ್ವಾಳ: ನೇತ್ರಾವತಿ ಸೇತುವೆ ಬಳಿ ಅಪಘಾತ| ಗಂಭೀರ ಗಾಯಗೊಂಡ ಬೈಕ್ ಸವಾರ ಸಾವು

ಸಮಗ್ರ ನ್ಯೂಸ್: ನಿರ್ಲಕ್ಷ್ಯತನ ಮತ್ತು ಅತೀವೇಗದಿಂದ ಬೈಕ್ ಚಲಾಯಿಸಿದ ಪರಿಣಾಮ ಅಪಘಾತ ಘಟಿಸಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಹಾಕಾಳಿ ಪಡ್ಪು ಬಳಿ ನೇತ್ರಾವತಿ ಸೇತುವೆಯ ಬಳಿ ನಡೆದಿದೆ. ಶುಕ್ರವಾರ ಸಂಜೆ ಅಪಘಾತ ನಡೆದಿದ್ದು, ಸಹಸವಾರ ಕೂಡ ಗಂಭೀರವಾಗಿ ಗಾಯಗೊಂಡಿದ್ದಾನೆ.

Ad Widget . Ad Widget .

ಬಂಟ್ವಾಳ ತಾಲೂಕಿನ ಲೊರೆಟ್ಟೊಪದವು ಟಿಪ್ಪುನಗರ ನಿವಾಸಿ ಸಲ್ಮಾನ್ ಫಾರಿಶ್ ಮೃತ ದುರ್ದೈವಿ. ಸಹ ಸವಾರ ಮೊಹಮ್ಮದ್ ಶಕೀರ್ ಗಂಭೀರ ಗಾಯಗೊಂಡಿದ್ದು ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಬಿ.ಸಿ.ರೋಡ್ ನಿವಾಸಿಗಳಾದ ಅವರಿಬ್ಬರು ಕೊಣಾಜೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಅವರು ನಿನ್ನೆ ಸಂಜೆ ಕೊಣಾಜೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ನೇತ್ರಾವತಿ ಸೇತುವೆ ಬಳಿ ವಾಹನ ಕಬ್ಬಿಣದ ತಗಡು ಶೀಟ್ ಗೆ ಢಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ.

ಬೈಕ್‌ ವೇಗವಾಗಿ ಚಲಿಸುತ್ತಿದ್ದ ಕಾರಣ ವಾಹನದಲ್ಲಿದ್ದ ಇಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಈ ಪೈಕಿ ‌ಸಲ್ಮಾನ್ ಪಾರಿಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಈ ಬಗ್ಗೆ ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *