ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ:ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ

ಸಮಗ್ರ ನ್ಯೂಸ್: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿಗಳಿಂದ ಪ್ರಚಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ.ಎನ್.ಡಿ.ಎ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ದೇವೇಗೌಡರು ಪ್ರಚಾರ ನಡೆಸಲಿದ್ದಾರೆ.

. Ad Widget . Ad Widget

ಬಿಜೆಪಿ ಸಂಸದ ಯದುವೀರ್ ಒಡೆಯರ್ ಹೊಂಗನೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೂ ಇಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಬಿರುಗಾಳಿ ಪ್ರಚಾರ ನಡೆಸಲಿದ್ದಾರೆ. ಒಟ್ಟು 13 ಕಡೆಗಳಲ್ಲಿ ಎಂದು ಹೆಚ್‌.ಡಿ.ಕೆ. ನಿಖಿಲ್ ಪರವಾಗಿ ಮತಯಾಚಿಸಲಿದ್ದಾರೆ.

. Ad Widget . . Ad Widget . Ad Widget

ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಚಾರ ನಡೆಸಲಿದ್ದಾರೆ. ಚನ್ನಪಟ್ಟಣ ಕ್ಷೇತ್ರದ ಹೊಂಗನೂರಿನಲ್ಲಿ ಡಿ.ಕೆ. ಶಿವಕುಮಾ‌ರ್ ಮತಯಾಚಿಸಲಿದ್ದಾರೆ. ಅವರು ಇಂದು ಒಟ್ಟು ಎಂಟು ಕಡೆಗಳಲ್ಲಿ ಮತಯಾಚನೆ ನಡೆಸಲಿದ್ದಾರೆ.

Leave a Comment

Your email address will not be published. Required fields are marked *