ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು.ಈ ಮೂಲಕ ಡಿಸಿಎಂ ಡಿಕೆಶಿಗೆ ಮತ್ತೆ ರಿಲೀಫ್ ನೀಡಿದೆ.ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ವಿಚಾರಣೆ ಕೈಗೆತ್ತಿಕೊಂಡರು.
ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರು ಕರ್ನಾಟಕ ಹೈಕೋರ್ಟ್ ನ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ ತಂದರು. ಅಲ್ಲದೇ ಸಿಬಿಐ ಮನವಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿಲ್ಲ ಎಂಬುದಾಗಿಯೂ ತಿಳಿಸಿದರು. ಈ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ನಾಲ್ಕುವಾರ ವಿಚಾರಣೆ ಮುಂದೂಡಿಕೆ ಮಾಡಿದೆ.