ವಾಹನ ಸವಾರರಿಗೆ ಗುಡ್ ನ್ಯೂಸ್..HSRP ನಂಬರ್ ಪ್ಲೇಟ್ ಅಳವಡಿಕೆ ಗಡುವು ಮತ್ತೆ ಮುಂದಕ್ಕೆ

ಸಮಗ್ರ ನ್ಯೂಸ್: HSRP ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಹಲವು ಬಾರಿ ಗಡುವು ವಿಸ್ತರಣೆ ಮಾಡಿದೆ. ಆದರೂ ವಾಹನ ಮಾಲೀಕರು ತಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಮುಂದಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಮತ್ತೊಂದು ಅವಕಾಶ ನೀಡಿದೆ. ಈ ತಿಂಗಳು ಕೊನೆ ಅಂದರೆ ನವೆಂಬರ್ 30ರವರೆಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

. Ad Widget . Ad Widget

ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸರ್ಕಾರ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಬಂದಿದೆ. ಬರೋಬ್ಬರಿ ನಾಲ್ಕು ಬಾರಿ ಗಡುವು ವಿಸ್ತರಿಸಿದೆ. ಆದರೂ ಸಹ 1.90 ಕೋಟಿ ಹಳೆ ವಾಹನಗಳ ಪೈಕಿ 55 ಲಕ್ಷ ವಾಹನಗಳಿಗೆ ಮಾತ್ರ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಇನ್ನೂ ಬಾಕಿ ವಾಹನಗಳ ಮಾಲೀಕರು ಅಳವಡಿಕೆ ಮಾಡಿಕೊಂಡಿಲ್ಲ. ಹೀಗಾಗಿ ರಾಜ್ಯ ಸಾರಿಗೆ ಇಲಾಖೆ ಇದೀಗ ಮತ್ತೊಂದು ಅವಕಾಶ ಮಾಡಿಕೊಟ್ಟಿದೆ. ಒಂದು ವೇಳೆ ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದಿದ್ದರೆ ಡಿಸೆಂಬರ್ 1ರಿಂದ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *