ಮೈಸೂರು: ಯುವತಿಯ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್!

ಸಮಗ್ರ ನ್ಯೂಸ್: ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನ ಹೊರವಲಯದಲ್ಲಿ ಬೆಚ್ಚಿ ಬೀಳಿಸಿದ ಪ್ರಕರಣ ಮಾಸುವ ಮೊದಲೇ ಇದೀಗ ಅಂತಹುದೇ ಪ್ರಕರಣ ಬೆಳಕಿಗೆ ಬಂದಿದೆ. ಯುವತಿಯೋರ್ವಳ ಮೇಲೆ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ ನಡೆಸಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

Ad Widget ... ..

ಆಕೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಯುವತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾಳೆ. ಮಡಿಕೇರಿ ಮೂಲದ ಯುವತಿಯಿಂದ ಇದೀಗ ಮೈಸೂರಿನ ವಿಜಯನಗರ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.

Ad Widget

ಮೈಸೂರಿನ ವಿಜಯನಗರ ಠಾಣೆಯಲ್ಲಿ ಯುವತಿ ಖುದ್ದು ಹಾಜರಾಗಿ ದೂರು ದಾಖಲಿಸಿದ್ದಾಳೆ. ನಿನ್ನೆ ಮಡಿಕೇರಿಯಿಂದ ಬಂದ ಯುವತಿ ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದಳು. ಈ ವೇಳೆ ಜೊತೆಗೆ ಇದ್ದಂತಹ ಸ್ನೇಹಿತರೇ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಯುವತಿ ವಿಜಯನಗರ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Comment

Your email address will not be published. Required fields are marked *