‘ಶಕ್ತಿ’ ಯೋಜನೆ ದುರ್ಬಳಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ.

Ad Widget ... ..

ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಪ್ರತಿದಿನ ಸರಾಸರಿ 45 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ನಿರ್ವಾಹಕರ ವಿರುದ್ಧ ಗೋಲ್ಮಾಲ್ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದಾಯ ಸೋರಿಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ.

Ad Widget

ಅಲ್ಲದೇ, ಕೆಲವು ಮಹಿಳೆಯರು ಉಚಿತ ಟಿಕೆಟ್ ಪಡೆಯುವ ಸಂಬಂಧಿಸಿದ ದಾಖಲೆ ತೋರಿಸದೆ ನಿರ್ವಾಹಕರೊಂದಿಗೆ ವಾಗ್ವಾದಕ್ಕೆ ಇಳಿಯುವುದು ನಡೆಯುತ್ತಿದ್ದು, ಈ ಗೊಂದಲಗಳಿಗೆ ತೆರೆ ಎಳೆಯಲು ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ನೀಡಲಾಗುವುದು ಎನ್ನಲಾಗಿದೆ.

Leave a Comment

Your email address will not be published. Required fields are marked *