Ad Widget .

ಸಚಿವ ಜಮೀ‌ರ್ ಅಹ್ಮದ್ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಶಾಸಕರು| ಎಐಸಿಸಿ ಅಧ್ಯಕ್ಷರಿಗೆ ದೂರು

ಸಮಗ್ರ ನ್ಯೂಸ್: ವಸತಿ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಇದೀಗ ಕಾಂಗ್ರೆಸ್ ಶಾಸಕರು, ಪಕ್ಷದ ಪದಾಧಿಕಾರಿಗಳೇ ಸಿಡಿದೆದ್ದಿದ್ದಾರೆ. ಒಂದೆಡೆ, ವಕ್ಫ್ ವಿಚಾರವಾಗಿ ಜಮೀರ್ ವಿರುದ್ಧ ಪ್ರತಿಪಕ್ಷ ಬಿಜೆಪಿ ಈಗಾಗಲೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರು ಬಹಿರಂಗವಾಗಿಯೇ ಜಮೀರ್ ವಿರುದ್ಧ ಸಮರ ಸಾರಿದ್ದಾರೆ. ಸಿಎಂ ಸಿದ್ದರಾಮಯ್ಯಗಿಂತಲೂ ಹೆಚ್ಚು ಜಮೀರ್‌ರನ್ನೇ ಗುರಿಯಾಗಿಸಿಕೊಂಡಿದ್ದಾರೆ.

Ad Widget . Ad Widget .

ವಕ್ಫ್ ವಿಚಾರದಿಂದ ಚುನಾವಣೆ ಹೊಸ್ತಿಲಲ್ಲಿ ನಾವೇ ರಾಜಕೀಯ ಮಾಡಲು ಅವಕಾಶ ಮಾಡಿಕೊಟ್ಟಂತಾಗಿದೆ ಎಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.‌ ಜಮೀರ್ ಹೇಳಿಕೆಗಳಿಗೆ ಕಡಿವಾಣ ಹಾಕಲು ಆಗ್ರಹ ಸದ್ಯ ಉಪಚುನಾವಣೆಗೆ ಸಜ್ಜಾಗಿರುವ ಶಿಗ್ಗಾಂವಿ ಕ್ಷೇತ್ರದಲ್ಲಿ ಜಮೀ‌ರ್ ಅಹ್ಮದ್ ತಾನೇ ಮುಂದೆ ನಿಂತು ಓಡಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಜಮೀ‌ರ್ ವಿರುದ್ಧ ಎಐಸಿಸಿ ಅಧ್ಯಕ್ಷರಿಗೆ ದೂರು ನೀಡಿದ ಕೈ ಶಾಸಕರು, ಜಮೀರ್ ಹೇಳಿಕೆಗೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ.

Ad Widget . Ad Widget .

ಅನಗತ್ಯ ಹೇಳಿಕೆಗಳನ್ನು ನೀಡಿ ಪಕ್ಷಕ್ಕೆ ಸರ್ಕಾರದ ವರ್ಚಸ್ಸಿಗೆ ಪದೇ ಪದೇ ಮುಜುಗರ ಹಾಗೂ ಪಕ್ಷಕ್ಕೆ, ಸರ್ಕಾರದ ವರ್ಚಸ್ಸಿಗೆ ತೀವ್ರ ಹಾನಿ ಮಾಡುತ್ತಿದ್ದಾರೆ. ನಮ್ಮಲ್ಲಿ ಸಾಕಷ್ಟು ಅಲ್ಪಸಂಖ್ಯಾತ ಶಾಸಕರಿದ್ದಾರೆ. ಆದರೆ ಜಮೀರ್ ಮಾತ್ರ ವಿಶೇಷವಾಗಿ ನಡೆದುಕೊಳ್ಳುತ್ತಿದ್ದಾರೆ. ತಾವು ಮಧ್ಯಪ್ರವೇಶಿಸಿ ಜಮೀ‌ರ್ ಹೇಳಿಕೆಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದೆ ಪಕ್ಷ ಭಾರೀ ಬೆಲೆ ತೆರಬೇಕಾದ ಪರಿಸ್ಥಿತಿ ಬರಲಿದೆ ಎಂದು ಖರ್ಗೆಗೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಶಾಸಕರು ಉಲ್ಲೇಖಿಸಿದ್ದಾರೆ.

Leave a Comment

Your email address will not be published. Required fields are marked *