ಸಮಗ್ರ ನ್ಯೂಸ್: ಮುಂದಿನ 5 ದಿನಗಳ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಿಗೆ ನವೆಂಬರ್ 8 ಮತ್ತು 9 ರಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ, ಇನ್ನುಳಿದ ದಿನಗಳಲ್ಲಿ ಮಳೆ ಕಡಿಮೆ ಇರುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ ಒಣ ಹವೆಯಿರುವ ಸಾಧ್ಯತೆಯಿದೆ.
ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ನವೆಂಬರ್ 9 ರಿಂದ ಮೂರು ದಿನಗಳ ಕಾಲ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ ಧರ್ಮಸ್ಥಳ, ಮಾಣಿ, ಉಪ್ಪಿನಂಗಡಿ, ಪುತ್ತೂರು, ಬೆಳ್ತಂಗಡಿ, ಮೂಡಿಗೆರೆ, ಸೋಮವಾರಪೇಟೆ, ಕೊಟ್ಟಿಗೆಹಾರ, ಚಿಂತಾಮಣಿ, ಬೇಲೂರು, ದೊಡ್ಡಬಳ್ಳಾಪುರ, ಎಂಎಂ ಹಿಲ್ಸ್ನಲ್ಲಿ ಮಳೆಯಾಗಿದೆ.
ಕರ್ನಾಟಕದ ಮೈಸೂರು, ಕೋಲಾರ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.
ನವೆಂಬರ್ 05 ರಿಂದ ನವೆಂಬರ್ 13 ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನವೆಂಬರ್ 11 ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗಲಿದ್ದು, ನವೆಂಬರ್ 12 ಮತ್ತು 13 ರಂದು ವ್ಯಾಪಕವಾಗಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.