Ad Widget .

ರಾ.ಹೆದ್ದಾರಿ 218ರಲ್ಲಿ ಭೀಕರ ಅಪಘಾತ| ಕುಕ್ಕೆಯಲ್ಲಿ ಪೂಜೆ ಮುಗಿಸಿ ಮರಳುತ್ತಿದ್ದ ದಂಪತಿ ದುರ್ಮರಣ

ಸಮಗ್ರ ನ್ಯೂಸ್: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ದಂಪತಿ ಸಾವನಪ್ಪಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾದ ಗದಗ – ವಿಜಯಪುರ ರಾ.ಹೆದ್ದಾರಿ 218ರ ಭೈರನಹಟ್ಟಿ ಗ್ರಾಮದ ಬಳಿ ನ.06 ಬುಧವಾರ ನಡೆದಿದೆ.

Ad Widget . Ad Widget .

ಮೃತರನ್ನು ಬಾಗಲಕೋಟೆಯ ಸಿದ್ದರಾಮ ಹಾಗೂ ಹೇಮಾ ಎಂದು ಗುರುತಿಸಲಾಗಿದೆ. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿದ್ದು, ಅವರನ್ನು ನರಗುಂದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ಬುಧವಾರ ಬೆಳಿಗ್ಗೆ ಅಪಘಾತ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ ಪೂಜೆ ಮುಗಿಸಿಕೊಂಡು ಮರಳಿ ಊರಿಗೆ ಬರುತ್ತಿದ್ದಾಗ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಹುಬ್ಬಳ್ಳಿ ಕಡೆಗೆ ಹೊರಟ್ಟಿದ್ದ ಲಾರಿ, ಬಾಗಲಕೋಟೆಗೆ ಹೊರಟ್ಟಿದ್ದ ಕಾರು ಇದಾಗಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *