Ad Widget .

ಕಡಬ: ನೆರೆಮನೆಯವರೊಂದಿಗೆ ಜಗಳ; ಕೊಲೆಯಲ್ಲಿ ಅಂತ್ಯ

ಸಮಗ್ರ ನ್ಯೂಸ್: ನೆರೆಮನೆಯವರೊಂದಿಗಿನ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ.

Ad Widget . Ad Widget .

ಕಡಬ ತಾಲೂಕು ಗೋಳಿತ್ತೊಟ್ಟು ಗ್ರಾಮದ ಅಲಾಂತಾಯ ನಿವಾಸಿ ವೆಂಕಪ್ಪ ಗೌಡರ ಪುತ್ರ ರಮೇಶ್ (51 ವ) ಕೊಲೆಯಾದವರು. ನೆರೆಮನೆಯ ಸಂಬಂಧಿ ಹರೀಶ ಎಂಬಾತ ಕತ್ತಿಯಿಂದ ಕಡಿದು ಕೊಲೆ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ.

Ad Widget . Ad Widget .

ಕೊಲೆಗೆ ಜಾಗದ ತಕರಾರು ಕಾರಣ ಎನ್ನಲಾಗಿದ್ದು ಈ ಬಗ್ಗೆ ಖಚಿತ ಮಾಹಿತಿ ತಿಳಿದಿಲ್ಲ, ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಬೈಕ್ ರಸ್ತೆಯಲ್ಲೇ ಬಿದ್ದಿರುವುದು ಕಂಡು ಬಂದಿದೆ. ತನಿಖೆ ಪ್ರಗತಿಯಲ್ಲಿದೆ.

Leave a Comment

Your email address will not be published. Required fields are marked *